ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಚಾತುರ್ಮಾಸ್ಯ ಸಮಿತಿ ವತಿಯಿಂದ ಶ್ರೀ ಮಠದ ಶಿಷ್ಯ ವೃಂದದವರ ಮಹಾಸಭೆ ಜೂ. 28ರಂದು ಸಂಜೆ 5.30ಕ್ಕೆ ಶ್ರೀ ಮಠದಲ್ಲಿ ಜರುಗಲಿದೆ.
ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಷಷ್ಠ ಚಾತುರ್ಮಾಸ್ಯ ವ್ರತಾಚರಣೆಯು 2026 ಜುಲೈ 29 ರಿಂದ ಸೆಪ್ಟೆಂಬರ್ 26 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಸಭೆ ಆಯೋಜಿಸಲಾಗಿದೆ.


