ಕುಂಬಳೆ: ಸರೋವರ ಕ್ಷೇತ್ರವೆಂದೇ ಪ್ರಸಿದ್ಧವಾದ ಕುಂಬಳೆ ಸನಿಹದ ಅನಂತಪುರ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆದು ಶ್ರೀ ದೇವರ ಬ್ರಹ್ಮಕಲಶೋತ್ಸವದ ಸಿದ್ಧತೆ ನಡೆದುಬರುತ್ತಿದ್ದು, ಈ ಬಗ್ಗೆ ಸಮಾಲೋಚನೆ ಹಾಗೂ ಸಮಿತಿ ರಚನಾ ಸಭೆ ಜೂನ್- 28ರಂದು ಬೆಳಗ್ಗೆ 10ಕ್ಕೆ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ.
ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉಪಸ್ಥಿತರಿದ್ದು, ಆಶೀರ್ವಚನ ನೀಡುವರು. ಶ್ರೀ ಕ್ಷೇತ್ರದ ಆಚಾರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಭಾಗವಹಿಸಲಿದ್ದಾರೆ. ಸಮಾಜದ ಪ್ರಮುಖ ಧಾರ್ಮಿಕ, ಸಾಮಾಜಿಕ ಮುಂದಾಳುಗಳು ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಲಿದ್ದಾರೆ.


