ನವದೆಹಲಿ : ದೆಹಲಿಯ ತಕಿಯಾ ಕಾಲೆ ಖಾನ್ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 30 ಗುಡಿಸಲುಗಳು ಸುಟ್ಟು ಹೋಗಿವೆ. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದರು.
ಮೌಲಾನಾ ಅಜಾದ್ ವೈದ್ಯಕೀಯ ಕಾಲೇಜಿನ ಹಿಂಬದಿಯಲ್ಲಿರುವ ಕೊಳೆಗೇರಿಯಲ್ಲಿ ಘಟನೆ ನಡೆದಿದೆ.
ಈ ಪ್ರದೇಶದಿಂದ 12 ಜನರನ್ನು ಸ್ಥಳಾಂತರಿಸಲಾಗಿದೆ. ಸೋಮವಾರ ರಾತ್ರಿ 11.22ಕ್ಕೆ ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿಯಿತು. 24 ಅಗ್ನಿಶಾಮಕ ವಾಹನಗಳು 3 ಗಂಟೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ ಎಂದರು.
ಹಳೆಯ ಪೀಠೋಪಕರಣ, ಮರದ ದಿಮ್ಮಿ ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಿ ಇಟ್ಟಿದ್ದ ಸ್ಥಳದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ಬಳಿಕ ಅದು ಹತ್ತಿರದ ಗುಡಿಸಲುಗಳಿಗೆ ವ್ಯಾಪಿಸಿದೆ. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹೇಳಿದರು.

