HEALTH TIPS

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ 'ಎಎನ್ -32' ವಿಮಾನ ಪತನ

ಜೋರ್ಹತ್ : ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭಾರತೀಯ ವಾಯುಪಡೆಯ (ಐಎಎಫ್) ವಿಮಾನ 'ಎಎನ್ -32' ಪತನಗೊಂಡಿದೆ ಎಂದು ರಕ್ಷಣಾ ವಕ್ತಾರರು ಶನಿವಾರ ತಿಳಿಸಿದ್ದಾರೆ. 


ಜೋರ್ಹತ್‌ನ ರೌರಿಯಾ ಪ್ರದೇಶದಲ್ಲಿರುವ ಐಎಎಫ್ ವಾಯುನೆಲೆಯಲ್ಲಿ ಇಳಿಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಐಎಎಫ್ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

ಬೆಂಕಿ ನಂದಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ತಕ್ಷಣವೇ, ತುರ್ತು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ವಿಮಾನದಲ್ಲಿದ್ದ ಸಿಬ್ಬಂದಿಯ ಸ್ಥಿತಿ ಹಾಗೂ ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.

ಐಎಎಫ್ ಘಟನೆಯನ್ನು ಖಚಿತಪಡಿಸಿದ್ದು, ಸಂಪೂರ್ಣ ಪರಿಶೀಲನೆ ಬಳಿಕ ಹೆಚ್ಚಿನ ವಿವರ ನೀಡುವುದಾಗಿ ತಿಳಿಸಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries