ಜನರಲ್ ಸ್ಯಾಂಟೊಸ್: ದಕ್ಷಿಣ ಫಿಲಿಪೈನ್ಸ್‌ನಲ್ಲಿ ಸೋಮವಾರ ಸಂಭವಿಸಿದ ಭೂಕಂಪದಿಂದ 37 ಮಂದಿ ಮೃತಪಟ್ಟಿದ್ದು, ಸುಮರು 32 ಸಾವಿರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹಾನಿಗೀಡಾದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಮಾಡಲು ರಕ್ಷಣಾ ತಂಡಗಳು ಮಂಗಳವಾರವೂ ಶೋಧ ಕಾರ್ಯಾಚರಣೆ ನಡೆಸಿದವು.
7.8 ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಭೂಕಂಪ ಸಂಭವಿಸಿದ ಕಾರಣ ವಿವಿಧ ಪ್ರಾಂತ್ಯಗಳಲ್ಲಿ ಒಟ್ಟು 2,500 ಮನೆಗಳು, 117 ಸರ್ಕಾರಿ ಕಟ್ಟಡಗಳು ಹಾನಿಗೀಡಾಗಿವೆ. ಜನರಲ್ ಸ್ಯಾಂಟೊಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸತತ ಎರಡನೇ ದಿನವೂ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಒಟ್ಟು 60 ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
1976ರ ಬಳಿಕ ಪ್ರಬಲ ಭೂಕಂಪ: ಫಿಲಿಪೈನ್ಸ್‌ನಲ್ಲಿ ಸೋಮವಾರ ಸಂಭವಿಸಿದ ಭೂಕಂಪವು 1976ರ ಬಳಿಕ ಘಟಿಸಿದ ಅತ್ಯಂತ ಪ್ರಬಲ ಭೂಕಂಪವಾಗಿದೆ. 1976ರ ಆಗಸ್ಟ್ 17ರಂದು 8.1ರ ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ವೇಳೆ ಸುಮಾರು 8 ಸಾವಿರ ಮಂದಿ ಮೃತಪಟ್ಟಿದ್ದರು. 1990ರಲ್ಲಿ 7.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿ ಒಂದು ಸಾವಿರ ಮಂದಿ ಸಾವಿಗೀಡಾಗಿದ್ದಾರೆ.

