HEALTH TIPS

ಅರುಣಾಚಲ ಪ್ರದೇಶದಲ್ಲಿ ಪ್ರವಾಹ: ಸಂಕಷ್ಟಕ್ಕೀಡಾದ 3 ಸಾವಿರ ಮಂದಿ

 ಇಟಾನಗರ: ಅರುಣಾಚಲ ಪ್ರದೇಶದ ಸಿಯಾಂಗ್‌ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದಾಗಿ 14 ಗ್ರಾಮಗಳ 3100 ಜನರು ಸಂಕಷ್ಟಕ್ಕೀಡಾಗಿದ್ದಾರೆ. 


ಪ್ರಾಕೃತಿಕ ವಿಕೋಪದಿಂದಾಗಿ ಕೃಷಿ ಭೂಮಿ, ಖಾಸಗಿ ಆಸ್ತಿಗಳು ಮತ್ತು ಸಾರ್ವಜನಿಕ ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ ಎಂದು ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಹಲವಾರು ಮಂದಿ ಮನೆಗಳನ್ನು ಬಿಟ್ಟು ಕೃಷಿಭೂಮಿಗಳಲ್ಲಿ ಗುಡಿಸಲಿನಲ್ಲಿ ನೆಲಸಿದ್ದಾರೆ. ಬಹುತೇಕರು ನಿರಾಶ್ರಿತರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸಿಯಾಂಗ್‌ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ. 500 ಮನೆಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಲವಾರು ವಾಹನಗಳಿಗೆ ಹಾನಿಯಾಗಿದೆ. ಕೋಳಿ, ಹಂದಿ ಸೇರಿದಂತೆ ಬೃಹತ್‌ ಪ್ರಮಾಣದಲ್ಲಿ ಸಾಕುಪ್ರಾಣಿಗಳು ಮೃತಪಟ್ಟಿವೆ.

ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮತ್ತು ವಿದ್ಯುತ್‌ ಕಂಬಗಳು, ತಂತಿಗಳು ಹಾನಿಗೊಂಡಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries