ಭುವನೇಶ್ವರ: ಒಡಿಶಾದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಶೇ.50ರಷ್ಟು ಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.
ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ.
ಕಾಂಗ್ರೆಸ್ ಬಹಳ ದಿನಗಳಿಂದ ಈ ಕುರಿತಾಗಿ ಒತ್ತಾಯಿಸುತ್ತಿದೆ. ಆದರೂ ವಿದ್ಯಾರ್ಥಿಗಳನ್ನು ಏಕೆ ಹೊರಗಿಡಲಾಗಿದೆ? ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ನಿರಂಜನ್ ಪಟ್ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.
ಒಡಿಶಾದ ಜನಸಂಖ್ಯೆಯಲ್ಲಿ ಮಹಿಳೆಯರು ಅರ್ಧದಷ್ಟಿರುವುದರಿಂದ, ಸರ್ಕಾರವು ಅವರಿಗೆ ಉನ್ನತ ಅಧ್ಯಯನದಲ್ಲಿ ಶೇ. 50 ರಷ್ಟು ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
2026-27ರ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ, ಎಸ್‌ಟಿ ಕೋಟಾವನ್ನು ಹೆಚ್ಚಿಸುವುದಾಗಿ ಹಾಗೂ ಸಾಮಾಜಿಕವಾಗಿ,ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹೊಸ ಕೋಟಾವನ್ನು ರಾಜ್ಯ ಸರ್ಕಾರ ಮಂಗಳವಾರ ಘೋಷಿಸಿದೆ.
😊😊

