HEALTH TIPS

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 589ಕ್ಕೇರಿಕೆ, 3,000 ಜನರಿಗೆ ಗಾಯ

ಕರಾಕಸ್‌: ವೆನೆಜುವೆಲಾದಲ್ಲಿ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಿಂದಾಗಿ ಮೃತಪಟ್ಟವರ ಸಂಖ್ಯೆ 589ಕ್ಕೆ ಏರಿಕೆಯಾಗಿದ್ದು, 3,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 

ವೆನೆಜುವೆಲಾದಲ್ಲಿ ಬುಧವಾರ(ಜೂ.24) ಸಂಜೆ 7.2ರಷ್ಟು ತೀವ್ರತೆಯ ಭೂಕಂಪ ಸಂಭವಿಸಿತ್ತು.

ಅದಾದ ಕೆಲ ಸೆಕೆಂಡುಗಳ ಅಂತರದಲ್ಲಿಯೇ ಮತ್ತೆ 7.5ರಷ್ಟು ತೀವ್ರತೆಯ ಭಾರಿ ಭೂಕಂಪ ಸಂಭವಿಸಿತ್ತು. ಇದರಿಂದ ದೇಶದ ವಿವಿಧೆಡೆ ಕಟ್ಟಡಗಳು ಕುಸಿದಿದ್ದು, ಅವಶೇಷಗಳ ಅಡಿ ನೂರಾರು ಜನ ಸಿಲುಕಿದ್ದಾರೆ. ದೇಶದ ಪ್ರಮುಖ ವಿಮಾನ ನಿಲ್ದಾಣಕ್ಕೂ ಹಾನಿಯಾಗಿದ್ದು, ಸಂಚಾರ ಸ್ಥಗಿತಗೊಳಿಸಲಾಗಿದೆ.

'ತುರ್ತು ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಂದರ ಹಿಂದೆ ಒಂದರಂತೆ ಸಂಭವಿಸಿದ ಭಾರಿ ಭೂಕಂಪಗಳಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ' ಎಂದು ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರಾಡ್ರಿಗಸ್ ಮಾಹಿತಿ ನೀಡಿದ್ದಾರೆ.

ಭೂಕಂಪದಿಂದಾಗಿ 49,500 ಜನರು ನಾಪತ್ತೆಯಾಗಿದ್ದು, 10,000 ಜನರು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭೂಕಂಪದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವೆನೆಜುವೆಲಾಕ್ಕೆ 35 ಟನ್ ಪರಿಹಾರ ಸಾಮಗ್ರಿ, ಔಷಧ ಮತ್ತು ವೈದ್ಯಕೀಯ ಉಪಕರಣಗಳನ್ನು ಭಾರತ ರವಾನಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries