HEALTH TIPS

ಪರಿಶಿಷ್ಟ ಜಾತಿಯವರಿಗೆ ಮನೆ ನಿರ್ಮಾಣ ಧನಸಹಾಯ 6 ಲಕ್ಷಕ್ಕೇರಿಸಬೇಕೆಂದು ಒತ್ತಾಯಿಸಿ ಸಚಿವರಿಗೆ ಮನವಿ


ಬದಿಯಡ್ಕ: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಧನ ಸಹಾಯವನ್ನು 6 ಲಕ್ಷ ರೂ.ಗೆ ಏರಿಸಬೇಕೆಂದು ಒತ್ತಾಯಿಸಿ ಬದಿಯಡ್ಕ ಪಂಚಾಯತಿ ಸದಸ್ಯ ಗಂಗಾಧರ ಗೋಳಿಯಡ್ಕ ರಾಜ್ಯ ಸ್ಥಳೀಯಾಡಳಿತ ಖಾತೆ ಸಚಿವ ಕೆ.ಎಂ. ಶಾಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯಕ್ರಮ ನಿಮಿತ್ತ ಸಚಿವರು ಸೋಮವಾರ ಕಿಳಿಂಗಾರಿನ ಸಾಯಿ ಮಂದಿರಕ್ಕೆ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಲಾಗಿದೆ. 

ಕಳೆದ ಹಲವು ವರ್ಷಗಳಿಂದ ಪರಿಶಿಷ್ಟ ಜಾತಿಯವರಿಗೆ ಮನೆ ನಿರ್ಮಾಣಕ್ಕೆ ಕೇವಲ 4 ಲಕ್ಷ ರೂ. ಸರ್ಕಾರ ನೀಡುತ್ತಿದೆ. ಆ ಮೊತ್ತದಿಂದ ಮನೆ ನಿರ್ಮಿಸಲು ಸಾಧ್ಯವಾಗದೆ ಹಲವು ಮನೆಗಳ ನಿರ್ಮಾಣ ಕೆಲಸ ಅರ್ಧದಲ್ಲೇ ಉಳಿದುಕೊಂಡಿದೆ. ಇದರಿಂದ ಬಡ ಕುಟುಂಬಗಳು ವಾಸ ಸೌಕರ್ಯವಿಲ್ಲದೆ ಸಂಕಷ್ಟವನ್ನು ಎದುರಿಸತ್ತಿವೆಯೆಂದು ಮನವಿಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಪರಿಶಿಷ್ಟ ವರ್ಗದವರಿಗೆ ಸರ್ಕಾರ ಮನೆ ನಿರ್ಮಾಣಕ್ಕೆ ಆರು ಲಕ್ಷ ರೂ. ನೀಡುತ್ತಿದೆ. ಹಾಗಿರುವಾಗ ಪರಿಶಿಷ್ಟ ಜಾತಿಯವರಿಗೂ ಆ ಮೊತ್ತವನ್ನು 6 ಲಕ್ಷ ರೂ.ಗೆ ಹೆಚ್ಚಿಸಬೇಕೆಂದೂ ಗಂಗಾಧರ ಗೋಳಿಯಡ್ಕ ಮನವಿಯಲ್ಲಿ ವಿನಂತಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries