HEALTH TIPS

ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಭೀತಿ ಇಲ್ಲ

 ಟೋಕಿಯೊ: ಉತ್ತರ ಜಪಾನ್‌ನ ಕರಾವಳಿ ಪ್ರದೇಶದಲ್ಲಿ ಗುರುವಾರ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಭೀತಿಯಿಲ್ಲ ಎಂದು ಅಲ್ಲಿನ ಹವಾಮಾನ ಇಲಾಖೆ ತಿಳಿಸಿದೆ.

ಇವಾಟೆಯ ಪೂರ್ವ ಕರಾವಳಿಯಲ್ಲಿ ಸುಮಾರು 50 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. 


ಈ ಪ್ರದೇಶದಲ್ಲಿ ಪದೇ ಪದೇ ಭೂಕಂಪಗಳು ಸಂಭವಿಸುತ್ತಿವೆ. ಆದರೆ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಈ ಕುರಿತು ಟೋಕಿಯೊದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಜಪಾನ್‌ ಪ್ರಧಾನಿ ಸನೆ ತಕೈಚಿ, ಅಗತ್ಯ ಪರಿಹಾರ ಕಾರ್ಯಗಳಿಗೆ ಸಿದ್ಧತೆ ನಡೆಸಲಾಗುತ್ತಿದೆ. ಭೂಕಂಪಪೀಡಿತ ಪ್ರದೇಶದ ಜನರು ಜಾಗರೂಕರಾಗಿರುವಂತೆಯೂ ಸಲಹೆ ನೀಡಿದ್ದಾರೆ.

ಜಪಾನ್‌ನ ಪರಮಾಣು ಹಾಗೂ ಇಂಧನ ಸ್ಥಾವರಗಳಿಗೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಪೆಸಿಫಿಕ್ ರಿಂಗ್ ಆಫ್ ಫೈರ್' ಎಂದು ಕರೆಯಲ್ಪಡುವ ಭೂಕಂಪಪೀಡಿತ ಪ್ರದೇಶದಲ್ಲಿ ಜಪಾನ್ ನೆಲೆಗೊಂಡಿದ್ದು, ಪದೇ ಪದೇ ಭೂಕಂಪಗಳು ವರದಿಯಾಗುತ್ತಿವೆ.

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ಅತ್ತ ವೆನೆಜುವೆಲಾದ ಕರಾವಳಿ ಭಾಗದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಎರಡು ಪ್ರಬಲ ಭೂಕಂಪ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries