ನವದೆಹಲಿ: ರಾಷ್ಟ್ರ ಮಟ್ಟದಲ್ಲಿ ಭಾರೀ ರಾಜಕೀಯ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೆ ಐಎಸಿಸಿ ತುರ್ತು ಸಭೆಯನ್ನು ಕರೆದಿದೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೆ.ಸಿ ವೇಣುಗೋಪಾಲ್, ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಇಂದು ದಿಲ್ಲಿಯ ಇಂದಿರಾ ಭವನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳು ಮತ್ತು ಪಿಸಿಸಿ ಅಧ್ಯಕ್ಷರ ತುರ್ತು ಸಭೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.


