HEALTH TIPS

ಜೈಸಲ್ಮೇರ್‌ ಪ್ರವಾಸದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಟಿಫಾನಿ

ಜೈಸಲ್ಮೇರ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಟಿಫಾನಿ ಟ್ರಂಪ್ ಅವರು ತಮ್ಮ ಪತಿ ಮೈಕೆಲ್ ಬೌಲೋಸ್ ಅವರೊಂದಿಗೆ ರಾಜಸ್ಥಾನದ ಜೈಸಲ್ಮೇರ್‌ಗೆ ಭೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಮೆರಿಕ ಅಧ್ಯಕ್ಷರ ಪುತ್ರಿಯ ಜೈಸಲ್ಮೇರ್‌ ಪ್ರವಾಸವು ಖಾಸಗಿ ಭೇಟಿಯಾಗಿದೆ.

ಟಿಫಾನಿ ಟ್ರಂಪ್ ದಂಪತಿಗಳು ದೆಹಲಿಯಿಂದ ಜೈಸಲ್ಮೇರ್ ನಾಗರಿಕ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಈ ವೇಳೆ ಬಿಗಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಜಿಲ್ಲಾಧಿಕಾರಿ ಅನುಪಮಾ ಜೋರ್ವಾಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಶಿವಹಾರೆ ಬರಮಾಡಿಕೊಂಡರು ಎಂದು ಹೇಳಿದ್ದಾರೆ.

ಟ್ರಂಪ್ ಪುತ್ರಿಯ ಭೇಟಿಯ ಹಿನ್ನಲೆಯಲ್ಲಿ ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸ್ಥಳೀಯ ಪೊಲೀಸರು, ಭಾರತೀಯ ಭದ್ರತಾ ಪಡೆಗಳು ಮತ್ತು ಅಮೆರಿಕದ ಸೀಕ್ರೆಟ್ ಸರ್ವಿಸ್ ಪಡೆಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೈಸಲ್ಮೇರ್‌ ಪ್ರವಾಸದ ವೇಳೆ ಅವರು ಸೋನಾರ್ ಕೋಟೆ, ಪಟ್ವೋನ್ ಕಿ ಹವೇಲಿ ಮತ್ತು ಗಡಿಸರ್ ಸರೋವರ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಟಿಫಾನಿ ಟ್ರಂಪ್ ದಂಪತಿಗಳು ತಾಜ್‌ ಮಹಲ್‌ಗೆ ಭೇಟಿ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries