HEALTH TIPS

ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಪಾಲುದಾರಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ಪ್ಯಾರಿಸ್ : ಪ್ಯಾರಿಸ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಲ್ಲಿನ ಅನಿವಾಸಿ ಭಾರತೀಯ ಸಮುದಾಯದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ ಜಾಗತಿಕ ಪ್ರಗತಿಗೆ ಭಾರತ ಮತ್ತು ಫ್ರಾನ್ಸ್ ನಡುವಿನ ಪಾಲುದಾರಿಕೆ ಮುಖ್ಯ ಎಂದು ಹೇಳಿದ್ದಾರೆ. 


ಬುಧವಾರ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡ ಬಳಿಕ, ಪ್ರಧಾನಿ ಮೋದಿ ಫ್ರಾನ್ಸ್‌ನ ಎವಿಯನ್-ಲೆಸ್-ಬೈನ್ಸ್‌ನಿಂದ ಪ್ಯಾರಿಸ್‌ಗೆ ಬಂದು ತಲುಪಿದರು.

'ನಾನು ಪ್ಯಾರಿಸ್‌ಗೆ ಬಂದಿಳಿದಿದ್ದೇನೆ. ಇಲ್ಲಿನ ಭಾರತೀಯ ಸಮುದಾಯದವರು ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದರು. ಭಾರತ ಮತ್ತು ಫ್ರಾನ್ಸ್ ನಡುವಿನ ಬಾಂದವ್ಯವನ್ನು ಮತ್ತಷ್ಟು ಬಲಪಡಿಸಲು ಅವರು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ನನಗೆ ಹೆಮ್ಮೆಯಿದೆ' ಎಂದು ಮೋದಿ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಲ್ಲದೇ ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಪಾಲುದಾರಿಕೆ ಅತ್ಯಗತ್ಯ ಎಂದೂ ಅವರು ಪ್ರತಿಪಾದಿಸಿದ್ದಾರೆ.

ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೆ ವಿವಾಟೆಕ್ 'ವಿವಾಟೆಕ್ 2026' ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಅಲ್ಲಿನ ಭಾರತೀಯರೊಂದಿಗೆ ಸಂವಾದ ನಡೆಸಲಿದ್ದಾರೆ.

ಪ್ರಸ್ತುತ ಫ್ರಾನ್ಸ್‌ನಲ್ಲಿ ಸುಮಾರು 1.19 ಲಕ್ಷ ಭಾರತೀಯರಿದ್ದರೆ, ಇತರ ಪ್ರಾಂತ್ಯಗಳಲ್ಲಿ 3.5 ಲಕ್ಷಕ್ಕೂ ಹೆಚ್ಚು ಭಾರತೀಯ ಮೂಲದರಿದ್ದಾರೆ.

ಪ್ಯಾರಿಸ್‌ಗೆ ಹೊರಡುವ ಮುನ್ನ ಜಿ7 ಶೃಂಗಸಭೆಯನ್ನು ಫಲಪ್ರದ ಎಂದು ಬಣ್ಣಿಸಿದ ಮೋದಿ, ಆಡಳಿತ ಮತ್ತು ನೀತಿ ನಿರೂಪಣೆಯ ಪ್ರಮುಖ ಕ್ಷೇತ್ರಗಳ ಕುರಿತು ಭಾರತದ ದೃಷ್ಟಿಕೋನಗಳನ್ನು ಮಂಡಿಸಲು ತಮಗೆ ಅವಕಾಶ ಸಿಕ್ಕಿತು ಎಂದು ಹೇಳಿದ್ದಾರೆ. ಜಾಗತಿಕ ಸಮೃದ್ಧಿಗಾಗಿ 'ಗ್ಲೋಬಲ್ ಸೌತ್' (ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ) ಜೊತೆಗೆ ನಿಕಟವಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿಹೇಳಿದ್ದಾರೆ.

ಬುಧವಾರ ನಡೆದ ಜಿ7 ವಿಶೇಷ ಸಭೆಯಲ್ಲಿ ಮಾತನಾಡಿದ ಮೋದಿ, ಜಿ7 ರಾಷ್ಟ್ರಗಳು, ಭಾರತ ಮತ್ತು ಗ್ಲೋಬಲ್ ಸೌತ್ ದೇಶಗಳ ಸಾಮರ್ಥ್ಯವನ್ನು ಒಟ್ಟುಗೂಡಿಸಿ ವ್ಯಾಪಾರ ಮತ್ತು ಸಂಪರ್ಕವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಪಶ್ಚಿಮ ಏಷ್ಯಾ ಬಿಕ್ಕಟ್ಟು ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಬೀರುತ್ತಿರುವ ದೀರ್ಘಕಾಲದ ಪರಿಣಾಮಗಳ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಶೃಂಗಸಭೆಯ ನಡುವೆ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಯುರೋಪಿಯನ್‌ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ನ್, ಜರ್ಮನ್ ಚಾನ್ಸಲರ್ ಫ್ರೆಡ್ರಿಕ್ ಮೆರ್ಜ್, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಮತ್ತು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಸೇರಿದಂತೆ ಪ್ರಮುಖ ಜಾಗತಿಕ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries