HEALTH TIPS

ಬಹುಸ್ತರದ ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಪ್ರಯೋಗ ಯಶಸ್ವಿ

ನವದೆಹಲಿ: ಬಹುಸ್ತರದ ಖಂಡಾಂತರ ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಂಬಂಧಿಸಿದ ಪರೀಕ್ಷೆಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಈ ವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಶತ್ರು ದೇಶಗಳ ದೀರ್ಘ ಮತ್ತು ಮಧ್ಯಮ ವ್ಯಾಪ್ತಿಯ ಪರಮಾಣು ಕ್ಷಿಪಣಿಗಳು ಮತ್ತು ಯುದ್ಧವಿಮಾನಗಳು ಗುರಿಯನ್ನು ತಲುಪುವ ಮುನ್ನವೇ ಹೊಡೆದುರುಳಿಸುವ ಸಾಮರ್ಥ್ಯವನ್ನು ಈ ವ್ಯವಸ್ಥೆಯು ಹೊಂದಿದೆ.

'ಶತ್ರು ದೇಶಗಳ ವಿವಿಧ ರೀತಿಯ ಬೆದರಿಕೆಗಳ ವಿರುದ್ಧ ಬಹುಸ್ತರದ ಖಂಡಾಂತರ ಕ್ಷಿಪಣಿ ವ್ಯವಸ್ಥೆಯ ಸಾಮರ್ಥ್ಯ ಪರೀಕ್ಷೆಗಾಗಿ ಜೂನ್‌ 10 ಮತ್ತು 11ರಂದು ಮೂರು ಬಾರಿ ಪ್ರಯೋಗ ನಡೆಸಲಾಗಿತ್ತು' ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಈ ವ್ಯವಸ್ಥೆಯನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ವಿನ್ಯಾಸ ಮತ್ತು ಅಭಿವೃದ್ಧಿಗೊಳಿಸಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries