ಮಂಜೇಶ್ವರ: ವರ್ಕಾಡಿ ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಯರ್ ಸೆಕೆಂಡರಿ ಶಾಲಾ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಪ್ರವೇಶೋತ್ಸವ ಗೀತೆಯೊಂದಿಗೆ ಮಕ್ಕಳನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ಗೋಪಾಲಕೃಷ್ಣ ಪಜ್ವ ಸಮಾರಂಭ ಉದ್ಘಾಟಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಮೋಹನ್ ಮಾಸ್ಟರ್ ಪ್ರಾಸ್ತಾವಿಕ ಮಾತುಗಳನ್ನಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್, ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ವಿಜಯಕುಮಾರ್, ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳಾದ ಉಸ್ಮಾನ, ಹಮೀದ್ ಕಣಿಯೂರು, ಮಾತೃ ಸಂಘದ ಉಪಾಧ್ಯಕ್ಷೆ ರೇಷ್ಮಾ ಹಾಗೂ ಸದಸ್ಯೆ ವಿಶಾಲಾಕ್ಷಿ ಉಪಸ್ಥಿತರಿದ್ದರು.
ಪೂರ್ಣಿಮಾ ಅವರು ಸೈಬರ್ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಿದರು. ಮುಖ್ಯ ಶಿಕ್ಷಕಿ ಕೃಷ್ಣವೇಣಿ ಬಿ ಸ್ವಾಗತಿಸಿದರು. ಸ್ವಾತಿ ಟೀಚರ್ ಕಾರ್ಯಕ್ರಮ ನಿರೂಪಿಸಿದರು.


