ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗ್ಗೆ ಗಣಹೋಮದ ನಂತರ ಶಿಶುವಾಟಿಕಾ ಮಕ್ಕಳಿಗಾಗಿ ಆಟದ ಮೈದಾನದ ಉದ್ಘಾಟನೆಯು ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾದ ಶ್ರೀ ಗೋಪಾಲಕೃಷ್ಣ ಪೈ ಬದಿಯಡ್ಕ, ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜನನಿ ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.
ಶಾಲಾ ಸಮಿತಿಯ ಅಧ್ಯಕ್ಷರಾದ ಗಣೇಶವತ್ಸ ಮಾತನಾಡಿ, ಶಾಲಾ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಕುರಿತು ವಿವರಿಸಿದರು. ಮುಖ್ಯೋಪಾಧ್ಯಾಯ ವೇಣುಗೋಪಾಲನ್ ನಾಯರ್, ರಂಗರಾವ್, ಗೋವಿಂದರಾಜ್ ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

.jpg)
.jpg)
