HEALTH TIPS

ಲೆಬನಾನ್ ಮೇಲೆ ಇಸ್ರೇಲ್ ನಿಂದ ದಾಳಿ: ಹಾರ್ಮುಝ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್

ಟೆಹರಾನ್: ಲೆಬನಾನ್ ಮೇಲೆ ದಾಳಿಯನ್ನು ಮುಂದುವರಿಸುವ ಮೂಲಕ ಇಸ್ರೇಲ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿರುವ ಇರಾನ್, ಹಡಗುಗಳ ಸಂಚಾರಕ್ಕೆ ಹಾರ್ಮುಝ್ ಜಲಸಂಧಿಯನ್ನು ಮುಚ್ಚಲಾಗಿದೆ ಎಂದು ಶನಿವಾರ ಪ್ರಕಟಿಸಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ಮೆಹ್ರ್ ವರದಿ ಮಾಡಿದೆ.

ಕದನ ವಿರಾಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ಮೊದಲ ಕ್ರಮವಾಗಿದ್ದು, ಒಂದು ವೇಳೆ ಲೆಬನಾನ್ ಮೇಲಿನ ಆಕ್ರಮಣ ಮುಂದುವರಿದರೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇರಾನ್ ಎಚ್ಚರಿಸಿದೆ.

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಇರಾನ್ ಈ ಘೋಷಣೆ ಮಾಡಿದ್ದು, ಜಾಗತಿಕ ತೈಲ ಸಾಗಣೆ ಹಾಗೂ ವಾಣಿಜ್ಯ ಚಟುವಟಿಕೆಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries