ಕಾಸರಗೋಡು: ನಗರದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರುಗಳ ಜಂಟಿ ಆಶ್ರಯದಲ್ಲಿ ನೇತ್ರ ತಪಾಸಣಾ ಉಚಿತ ಶಿಬಿರ ಜೂನ್ 14ರಂದು ಬೆಳಗ್ಗೆ 10ಕ್ಕೆ ವಿದ್ಯಾನಗರ ನೆಲ್ಲಿಕಳ ಪ್ರೀಮೆಟ್ರಿಕ್ ಹಸ್ಟೆಲ್‍ನಲ್ಲಿ ಜರುಗಲಿದೆ. ಶಿಬಿರ ಮಧ್ಯಾಹ್ನ 1ರ ವರೆಗೆ ಇರಲಿದೆ.
ಶಿಬಿರದಲ್ಲಿ ಪಾಲ್ಗೊಂಡು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳ ಪಡುವವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸಾ ಸೌಲಭ್ಯ ಒದಗಿಸಲಾಗುವುದು. ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಉಚಿತವಾಗಿರಲಿದ್ದು, ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕಣ್ಣಿನ ಪೆÇರೆ ಶಸ್ತ್ರಚಿಕಿತ್ಸೆಯನ್ನು ಕಾಸರಗೋಡಿನ ಪ್ರಸಾದ್ ನೇತ್ರಾಲಯದಲ್ಲಿ ನಡೆಸಲಾಗುವುದು. ಈ ಬಗ್ಗೆ ಮಾಹಿತಿಗಾಗಿ ಸಾರ್ವಜನಿಕ ಸಂಪರ್ಕಾಧಿಕಾರಿ, ಪ್ರಸಾದ್ ನೇತ್ರಾಲಯ, ಕಾಸರಗೋಡು(ಮೊಬೈಲ್ 9019314713)ಸಂಪರ್ಕಿಸಬಹುದಾಗಿದೆ. ಶಿಬಿರದಲ್ಲಿ ಮಧುಮೇಹ ಮತ್ತು ರಕ್ತದೊತ್ತಡದ ಉಚಿತ ತಪಾಸಣೆ ನಡೆಯುವುದಾಗಿ ಪ್ರಕಟಣೆ ತಿಳಿಸಿದೆ.

