ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ 2026- 27ನೇ ಶೈಕ್ಷಣಿಕ ವರ್ಷದ ಪ್ರವೇಶೋತ್ಸವ ಕಾರ್ಯಕ್ರಮ 'ಸ್ವಾಗತ ಭಾರತಿ' ಜರಗಿತು. ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಆಗಮಿಸಿ, ಸಂಸ್ಕøತಿ ಸಂಸ್ಕಾರಯುತ ಶಿಕ್ಷಣ ಇಂದಿನ ಅವಶ್ಯಕತೆಗಳಲ್ಲಿ ಒಂದು. ವಿದ್ಯಾಪೀಠ ಇಂತಹ ಶಿಕ್ಷಣ ನೀಡುವುದರಲ್ಲಿ ಮುಂದಿದೆ , ವಿದ್ಯಾರ್ಥಿಗಳು ಈ ಶಿಕ್ಷಣ ಪದ್ದತಿಯನ್ನು ಪಡೆದು ವಿಕಸಿತ ಭಾರತದ ಕಲ್ಪನೆಯನ್ನು ಸಾಕರಗೊಳಿಸುವಂತಾಗಲಿ ಎಂದು ಶುಭಹಾರೈಸಿದರು.
ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಉದಯಕುಮಾರ್ ಮಾಯಿಪ್ಪಾಡಿ, ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಎಡನಾಡು- ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಶ್ಯಾಮರಾಜ್ ದೊಡ್ಡಮಾಣಿ, ಮಾತೃ ಸಮಿತಿಯ ಅಧ್ಯಕ್ಷೆ ದೀಪಾ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಭೆರ್ಮರ್ಗ, ಸಹ ಮುಖ್ಯ ಶಿಕ್ಷಕಿ ಚಿತ್ರಾ ಸರಸ್ವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಡನಾಡು -ಕಣ್ಣೂರು ಸೇವಾ ಸಹಕಾರಿ ಬ್ಯಾಂಕಿನ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ಕಲಿಕೋಪಕರಣಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು. ವಿದ್ಯಾರ್ಥಿನಿಯರಾದ ಕುಮಾರಿ ಕನಿಹ ,ಕುಮಾರಿ ಪೃಥ್ವಿ ಪ್ರಾರ್ಥನೆಯನ್ನು ಹಾಡಿದರು. ಶಿಕ್ಷಕಿ ಶ್ರೀದೇವಿ ಸ್ವಾಗತಿಸಿ, ಅಧ್ಯಾಪಕ ಹರಿಪ್ರಸಾದ್ ವಂದಿಸಿದರು. ವಿದ್ಯಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
