ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ವೈದ್ಯಕೀಯ ಕಾಲೇಜುಗಳ ಕೆಲವು ವಿದ್ಯಾರ್ಥಿಗಳು ಭಾಗಿಯಾಗಿರುವ ಘಟನೆಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಯೋಗ ಗುರುವಾರ ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆಯ ನಿರ್ವಹಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಉನ್ನತ ಶಿಕ್ಷಣ ಇಲಾಖೆಯಿಂದ ಸ್ವೀಕರಿಸಿರುವ ನಿರ್ದೇಶನಗಳಿಗೆ ಅನುಗುಣವಾಗಿ ಈ ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ.
ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಆಯೋಗವು ವೈದ್ಯಕೀಯ ಕಾಲೇಜುಗಳಿಗೆ ಸೂಚಿಸಿದೆ.

