HEALTH TIPS

ದೆಹಲಿಯಲ್ಲಿ ಹವಾಮಾನ ವೈಪರೀತ್ಯ: ರೆಡ್ ಅಲರ್ಟ್ ಘೋಷಣೆ

ನವದೆಹಲಿ: ದೆಹಲಿಯ ಹವಾಮಾನವು ಸೋಮವಾರ ಮಧ್ಯಾಹ್ನ ದಿಢೀರ್ ಬದಲಾವಣೆ ಕಂಡಿದ್ದು, ನಗರದ ಹಲವು ಭಾಗಗಳಲ್ಲಿ ಧೂಳಿನ ಬಿರುಗಾಳಿಯೊಂದಿಗೆ ಬಲವಾದ ಗಾಳಿ ಬೀಸಿದೆ. ಭಾರತೀಯ ಹವಾಮಾನ ಇಲಾಖೆಯು (IMD) ಗುಡುಗು ಸಹಿತ ಮಳೆಯ 'ರೆಡ್ ಅಲರ್ಟ್' ಘೋಷಿಸಿದೆ.

ಇಡೀ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಧೂಳಿನ ಬಿರುಗಾಳಿ, ನಂತರ ಗುಡುಗು ಸಹಿತ ಸಾಧಾರಣ ಮಳೆ, ಮಿಂಚು ಹಾಗೂ ಗಂಟೆಗೆ 70-90 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಾಲಂನಲ್ಲಿ ಸೋಮವಾರ ಅಪರಾಹ್ನ 2.30ರ ಸುಮಾರಿಗೆ ಗಂಟೆಗೆ 50 ನಾಟ್ಸ್ (92 ಕಿ.ಮೀ.) ವೇಗದ ಗಾಳಿ ದಾಖಲಾಗಿದೆ.

ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 60-70 ಕಿ.ಮೀ. ವೇಗದ (ಕೆಲವೊಮ್ಮೆ ಗಂಟೆಗೆ 80 ಕಿ.ಮೀ.ವರೆಗೆ) ಬಲವಾದ ಗಾಳಿಯೊಂದಿಗೆ ಲಘುವಿನಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು IMD ತಿಳಿಸಿದೆ.

ಪ್ರಸ್ತುತ ಹಿಮಾಲಯ ಪ್ರದೇಶದ ಮೇಲೆ ಪ್ರಭಾವ ಬೀರುತ್ತಿರುವ ಹವಾಮಾನ ವೈಪರೀತ್ಯವು ಈ ಹಠಾತ್ ಬದಲಾವಣೆಗೆ ಕಾರಣ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರದಿಂದ ಇದರ ಪ್ರಭಾವ ಕಡಿಮೆಯಾಗುವ ಸಾಧ್ಯತೆಯಿದ್ದು, ನಂತರ ತಾಪಮಾನವು ಮತ್ತೆ ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಮುಂಜಾನೆಯೂ ಸಹ ಲಘು ಮಳೆಯಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ, ದಿಲ್ಲಿಯ ಪ್ರಮುಖ ಹವಾಮಾನ ಕೇಂದ್ರವಾದ ಸಫ್ದರ್ಜಂಗ್ ನಲ್ಲಿ ಕನಿಷ್ಠ ತಾಪಮಾನ 28.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾಮಾನ್ಯ ತಾಪಮಾನಕ್ಕಿಂತ 0.7 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries