ಮಂಜೇಶ್ವರ : ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಂಗವಾಗಿ ಶಾಲಾ ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ವಾರ್ಡ್ ಸದಸ್ಯೆ ಶರ್ಮಿಳ ಎಂ ಶೆಟ್ಟಿ ಚಾರ್ಲ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿ 'ನಮ್ಮ ಉತ್ತಮ ಭವಿಷ್ಯಕ್ಕೆ ಪರಿಸರವನ್ನು ಸುಂದರವಾಗಿರಿಸಬೇಕು. ಪರಿಸರಕ್ಕೆ ಹಾನಿಯಾಗುವಂತಹ ಪ್ಲಾಸ್ಟಿಕ್ ನಂತಹ ಮಾರಕ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಬೇಕು." ಎಂದರು. ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕಿಯರಾದ ನಯನ ಎಂ, ಅಶ್ವಿನಿ ಎಂ, ಶ್ವೇತ ಇ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ಶೇಖ್ ಅಬ್ದುಲ್ ಮಜೀದ್ ಚಾರ್ಲ ಅವರು ಉಪಸ್ಥಿತರಿದ್ದು ಸಹಕರಿಸಿದರು. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳು ಪರಿಸರ ಗೀತೆಯನ್ನು ಹಾಡಿ, ಜನ ಜಾಗೃತಿ ಮೂಡಿಸುವ ಪೋಸ್ಟರ್ ನಿರ್ಮಾಣ ಮಾಡಿದ್ದರು.

.jpg)
.jpg)
