HEALTH TIPS

ಪ್ರಧಾನಿ ಮೋದಿಗೆ ಸ್ಲೊವಾಕಿಯಾದ ಅತ್ಯುನ್ನತ ನಾಗರಿಕ ಪುರಸ್ಕಾರ

 ಬ್ರಾಟಿಸ್ಲಾವಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೊವಾಕಿಯಾ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' (ಫಸ್ಟ್ ಕ್ಲಾಸ್) ಅನ್ನು ನೀಡಿ ಗೌರವಿಸಲಾಗಿದೆ.

ಇದು ಪ್ರಧಾನಿ ಮೋದಿ ಅವರಿಗೆ ದೊರೆತ 33ನೇ ಅಂತರರಾಷ್ಟ್ರೀಯ ಗೌರವವಾಗಿದೆ. 


ಬ್ರಾಟಿಸ್ಲಾವಾದಲ್ಲಿ ನಡೆದ ಸಮಾರಂಭದಲ್ಲಿ ಸ್ಲೊವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಮೋದಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

'ಬ್ರಾಟಿಸ್ಲಾವಾದಲ್ಲಿ 'ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' (ಫಸ್ಟ್ ಕ್ಲಾಸ್) ಪ್ರಶಸ್ತಿಯನ್ನು ಸ್ವೀಕರಿಸಲು ಹೆಮ್ಮೆಯಾಗುತ್ತಿದೆ. ಈ ಗೌರವಕ್ಕಾಗಿ ಸ್ಲೊವಾಕಿಯಾದ ಜನತೆ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಗೌರವವು ಭಾರತದ 140 ಕೋಟಿ ಜನರಿಗೆ ಸೇರಿದ್ದಾಗಿದೆ. ನಾನು ಈ ಪ್ರಶಸ್ತಿಯನ್ನು ಭಾರತ ಮತ್ತು ಸ್ಲೊವಾಕಿಯಾ ನಡುವಿನ ಶಾಶ್ವತ ಸ್ನೇಹಕ್ಕೆ ಅರ್ಪಿಸುತ್ತೇನೆ' ಎಂದು ಮೋದಿ ಅವರು 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

'ಈ ಪ್ರಶಸ್ತಿಯು ಭಾರತ ಮತ್ತು ಸ್ಲೊವಾಕಿಯಾದ ಜನರನ್ನು ಒಗ್ಗೂಡಿಸುವ ಆತ್ಮೀಯತೆ ಮತ್ತು ಪ್ರೀತಿಯ ಸಂಕೇತವಾಗಿದೆ. ಅಲ್ಲದೆ, ಈ ಗೌರವವು ಉಭಯ ದೇಶಗಳ ಭವಿಷ್ಯದ ಪೀಳಿಗೆಗೆ ತಮ್ಮ ವಿಶೇಷ ಸ್ನೇಹವನ್ನು ಮುಂದುವರಿಸಲು ಪ್ರೇರೇಪಿಸುತ್ತದೆ' ಎಂದೂ ಮೋದಿ ಹೇಳಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

'ದಿ ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' (ಫಸ್ಟ್ ಕ್ಲಾಸ್) ಎಂಬುದು ಸ್ಲೊವಾಕಿಯಾ ದೇಶವು ವಿದೇಶಿ ಗಣ್ಯರಿಗೆ ನೀಡುವ ಅತ್ಯುನ್ನತ ನಾಗರಿಕ ಮತ್ತು ಮಿಲಿಟರಿ ಪ್ರಶಸ್ತಿಯಾಗಿದೆ.

ಮೋದಿ ಅವರು ಪ್ರಸ್ತುತ ಯುರೋಪ್ ಪ್ರವಾಸದ ಭಾಗವಾಗಿ ಸ್ಲೊವಾಕಿಯಾಕ್ಕೆ ಬಂದಿಳಿದಿದ್ದಾರೆ. ಭಾರತದ ಪ್ರಧಾನಿಯೊಬ್ಬರು ಈ ಯುರೋಪಿಯನ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ವಲಸೆ, ಡಿಜಿಟಲ್‌ ತಂತ್ರಜ್ಞಾನ ಹಾಗೂ ರಕ್ಷಣಾ ಕ್ಷೇತ್ರ ಸೇರಿದಂತೆ ಒಟ್ಟು 11 ಒಪ್ಪಂದಗಳಿಗೆ ಸೋಮವಾರ ಸಹಿ ಹಾಕಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries