HEALTH TIPS

ಮುಳಿಂಜ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾ ಅಸೆಂಬ್ಲಿಯಲ್ಲಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮವನ್ನು ಬಿ.ಆರ್.ಸಿ. ಮಂಜೇಶ್ವರದ ಬಿ.ಪಿ.ಸಿ.  ರಾಜಗೋಪಾಲನ್ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಅವರು ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಸಂದೇಶ ನೀಡಿದರು.

ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ  ಪರಿಸರಕ್ಕೆ ಸಂಬಂಧಿಸಿದ ಶಾಲಾ ಶಿಕ್ಷಕಿ ಜಸಿಲಾ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ಪದ್ಯವನ್ನು ಹಾಡಿದರು.

ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ, ಬಣ್ಣ ಹಚ್ಚುವುದು, ಪ್ರಕೃತಿ ವೀಕ್ಷಣೆ, ಪೋಸ್ಟರ್ ತಯಾರಿ ಹಾಗೂ ಕ್ವಿಜ್ ಸ್ಪರ್ಧೆ ಸೇರಿದಂತೆ ವಿವಿಧ ಪರಿಸರ ಜಾಗೃತಿ ಚಟುವಟಿಕೆಗಳನ್ನು ಆಯೋಜಿಸಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹೆತ್ತವರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಶಾಲಾ ಹಿರಿಯ ಶಿಕ್ಷಕ ರಿಯಾಜ್ ಎಂ.ಎಸ್  ಸ್ವಾಗತಿಸಿ, ಶಿಕ್ಷಕಿ ಐಶ್ವರ್ಯ ವಂದಿಸಿದರು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries