HEALTH TIPS

ಕುವೈತ್, ಬಹರೇನ್‌ ನೆಲೆಗಳ ಮೇಲೆ ಇರಾನ್ ದಾಳಿ: ಅಮೆರಿಕ ಪ್ರತಿದಾಳಿ

 ಟೆಹರಾನ್/ವಾಷಿಂಗ್ಟನ್: ಕುವೈತ್ ಮತ್ತು ಬಹರೇನ್‌ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಕುವೈತ್ ಮತ್ತು ಬಹರೇನ್‌ ಕಡೆಗೆ ಇರಾನ್ ಹಾರಿಸಿದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಸೇನೆ ತಿಳಿಸಿದೆ.


ಇದಕ್ಕೆ ಪ್ರತೀಕಾರವಾಗಿ ಇರಾನ್‌ನ ಸೇನಾ ನೆಲೆ ಮೇಲೆ ದಾಳಿ ನಡೆಸಲಾಗಿದೆ ಎಂದೂ ಸ್ಪಷ್ಟಪಡಿಸಿದೆ.

'ದೇಶದ ವಿವಿಧ ಭಾಗಗಳಲ್ಲಿ ಭಾರಿ ಸ್ಫೋಟದ ಶಬ್ದ ಕೇಳಿಬಂದಿದೆ. ವೈಮಾನಿಕ ಬೆದರಿಕೆ ತಡೆಯಲು ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ. ಇರಾನ್‌ನ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೇವೆ' ಎಂದು ಕುವೈತ್ ಹೇಳಿದೆ.

ಅಮೆರಿಕ ಮತ್ತು ಇಸ್ರೇಲ್ ಜತೆಗಿನ ಕದನ ವಿರಾಮದ ವಿಸ್ತರಣೆಗೆ ಸಂಬಂಧಿಸಿದಂತೆ ಮಧ್ಯಸ್ಥಿಕೆಗಾರರೊಂದಿಗಿನ ಸಂವಹನವನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ವರದಿಗಳನ್ನು ತಳ್ಳಿಹಾಕಿದ್ದು, ಮಾತುಕತೆ ಇನ್ನೂ ಮುಂದುವರಿದಿದೆ ಎಂದು ಒತ್ತಿ ಹೇಳಿದ್ದಾರೆ. ಅಮೆರಿಕ-ಇರಾನ್ ಶಾಂತಿ ಪ್ರಯತ್ನಗಳ ಬಗ್ಗೆ ಅನಿಶ್ಚಿತತೆ ಮೂಡಿದ ಕೆಲವೇ ಗಂಟೆಗಳಲ್ಲಿ ಹೊಸ ದಾಳಿಗಳು ನಡೆದಿವೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries