HEALTH TIPS

ನಾಲಂದ ಕಾಲೇಜಿನಲ್ಲಿ "ಎಕ್ಸಲೆಂಸಿಯಾ" ಕಾರ್ಯಕ್ರಮ - ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ; ಮಾರ್ಗದರ್ಶನ

ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಮತ್ತು ಶೈಕ್ಷಣಿಕ ಉತ್ಕøಷ್ಟತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ “ಎಕ್ಸಲೆಂಸಿಯಾ” ಕಾರ್ಯಕ್ರಮ ಆಯೋಜಿಸಲಾಯಿತು. 


ಮಂಜೇಶ್ವರ ಗೋವಿಂದ ಪೈ ಸರ್ಕಾರಿ ಕಾಲೇಜು ಪ್ರಾಂಶುಪಾಲ ಮೊಹಮ್ಮದ್ ಅಲಿ ಪೆರ್ಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ವೃತ್ತಿ ಅವಕಾಶಗಳು ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಶೈಕ್ಷಣಿಕ ಸಾಧನೆಯೊಂದಿಗೆ ವ್ಯಕ್ತಿತ್ವ ವಿಕಾಸದ ಮಹತ್ವವನ್ನು ವಿವರಿಸಿದರು.

ಕಾಲೇಜು ಪ್ರಾಂಶುಪಾಲ ಡಾ.ಮೋಹನ ಕುಂಟಾರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಮಥ್ರ್ಯವನ್ನು ಗುರುತಿಸಿ ನಿರಂತರ ಪರಿಶ್ರಮದ ಮೂಲಕ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕೆಂದು ಸಲಹೆ  ನೀಡಿದರು. ಉಪ ಪ್ರಾಂಶುಪಾಲ ಶಂಕರ ಖಂಡಿಗೆ ಶುಭ ಹಾರೈಸಿದರು. 

ಮಲಯಾಳಂ ವಿಭಾಗದ ಉಪನ್ಯಾಸಕಿ ವಿನೀಶಾ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ಲಸ್ ಟು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ಇಂಗ್ಲಿಷ್ ಉಪನ್ಯಾಸಕಿ  ಶಿಲ್ಪ ಸ್ವಾಗತಿಸಿದರು. ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಅನುಪಮಾ ನಿರೂಪಿಸಿದರು. ಉಪನ್ಯಾಸಕಿ ನಿಶ್ಮಿತಾ ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries