ನವದೆಹಲಿ: ದೊಡ್ಡದೊಡ್ಡ ಕಂಪನಿಗಳ ಸಿಇಒಗಳನ್ನು (ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳು) ಗುರಿಯಾಗಿಸಿ ಸೈಬರ್ ವಂಚನೆಯ ಖೆಡ್ಡಾಕ್ಕೆ ಬೀಳಿಸಿಕೊಳ್ಳುವ ಹೊಸ ತಂತ್ರ ದೇಶದಲ್ಲಿ ಹೆಚ್ಚಾಗುತ್ತಿದೆ. ಇಂತಹ 'ಬಾಸ್ ಸ್ಕ್ಯಾಮ್'ಗಳ ಬಗ್ಗೆ ಎಚ್ಚರವಾಗಿರಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಸಲಹೆ ನೀಡಿದೆ.
ತನಿಖಾ ಸಂಸ್ಥೆಗಳು ಅಥವಾ ಅದರ ಉನ್ನತಾಧಿಕಾರಿಗಳ ಸೋಗಿನಲ್ಲಿ ವಂಚಕರು ಕಂಪನಿ ಸಿಇಒಗಳ ವಾಟ್ಸ್ಆಯಪ್ ಖಾತೆಗಳನ್ನು ಪ್ರವೇಶಿಸಿ, ಅಧೀನ ಅಧಿಕಾರಿಗಳಿಗೆ ಸಂದೇಶಗಳನ್ನು ಕಳಿಸುವ ಮೂಲಕ ಇನ್ನೊಬ್ಬರ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಳ್ಳುತ್ತಿದ್ದಾರೆ ಎಂದು ಎಚ್ಚರಿಸಿದೆ.

