HEALTH TIPS

ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಜಹಾಂಗೀರ್‌ ಖಾನ್ ಬಂಧನ

 ಕೋಲ್ಕತ್ತ: ಎಂಸಿ ನಾಯಕ ಜಹಾಂಗೀರ್‌ ಖಾನ್ ಅವರನ್ನು ಸೋಮವಾರ (ಮೇ 8) ಉತ್ತರ ಬಂಗಾಳದ ಭಾರತ-ನೇಪಾಳ ಗಡಿ ಬಳಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲ್ಲೆ, ಸುಲಿಗೆ, ಬೆದರಿಕೆ ಸೇರಿ ಅನೇಕ ಆರೋಪಗಳಡಿ ಜಹಾಂಗೀರ್‌ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು. 


ಈ ಸಂಬಂಧ ರಕ್ಷಣೆ ಕೋರಿ ಅವರು ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು.

ಜಹಾಂಗೀರ್‌ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಕಲ್ಕತ್ತಾ ಹೈಕೋರ್ಟ್ ಮೇ 26 ರಂದು ರದ್ದುಗೊಳಿಸಿತ್ತು. ಇದರ ಬೆನ್ನಲೇ ಅವರು ತಲೆಮರೆಸಿಕೊಂಡಿದ್ದರು.

ಈಗ ಅವರನ್ನು ಉತ್ತರ ಬಂಗಾಳದ ಭಾರತ-ನೇಪಾಳ ಗಡಿಯ ಬಳಿ ಬಂಧಿಸಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್‌ 29ರಂದು ನಡೆದ ಮತದಾನದ ವೇಳೆ ಹಲವಾರು ಅಕ್ರಮಗಳು ನಡೆದಿವೆ ಎಂಬ ಕಾರಣ ನೀಡಿ ಚುನಾವಣಾ ಆಯೋಗವು ಈ ಕ್ಷೇತ್ರದಲ್ಲಿ ಮೇ 21ರಂದು ಮರು ಮತದಾನ ನಡೆಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ವಿವಿಧೆಡೆ ಟಿಎಂಸಿ ಮುಖಂಡರ ವಿರುದ್ಧ ಅನೇಕ ಆರೋಪಗಳು ಕೇಳಿ ಬಂದಿದ್ದವು.

ಬಿಜೆಪಿ ಅಭ್ಯರ್ಥಿ ದೇವಾಂಗ್ಶು ಪಾಂಡಾ ಅವರು 1,49,666 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಜಹಾಂಗೀರ್‌ ಖಾನ್‌ ಅವರು 7,783 ಮತಗಳನ್ನು ಮಾತ್ರ ಪಡೆದುಕೊಂಡಿದ್ದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries