ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಮುಜಫ್ಫರಾಬಾದ್ ಸಮೀಪ ಪಾಕಿಸ್ತಾನ ವಾಯುಪಡೆಗೆ ಸೇರಿದ ಎಂಐ-17 ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ.
ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸೇನೆ ಮಾಹಿತಿ ನೀಡಿದೆ.
'ಹಾರಾಟ ಆರಂಭಿಸಿದ ವೇಳೆ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಅವಘಡ ಸಂಭವಿಸಿದೆ.
ಘಟನೆಯ ತನಿಖೆಗೆ ಆದೇಶಿಸಲಾಗಿದೆ' ಎಂದು ಸೇನಾ ಪ್ರಕಟಣೆ ತಿಳಿಸಿದೆ. ಆದರೆ ಮೃತಪಟ್ಟವರ ಸಂಖ್ಯೆ ಎಷ್ಟು ಎಂದು ಹೇಳಿಲ್ಲ.
2025ರಲ್ಲೂ ಗಿಲ್ಗಿಟ್-ಬಲಿಸ್ತಾನ್ ಬಳಿ ತಾಂತ್ರಿಕ ದೋಷದಿಂದ ಸೇನಾ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿದ್ದರು.

