ಕಾಸರಗೋಡು: ಮಳೆ ಕೊಯ್ಲು, ಜಲಮರುಪೂರಣ ಹಾಗೂ ಸೌರಯೋಜನೆಯ ಮೂಲಕ ಬರಡು ನೆಲದಲ್ಲಿ ಹಸುರು ಕ್ರಾಂತಿಯನ್ನುಂಟು ಮಾಡಿರುವ ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ಕಣ್ಣೂರು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ರತ್ನಾಕರ ಮಲ್ಲಮೂಲೆ ಅವರಿಗೆ ವನಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ ಪರಿಸರದಿನದ ಅಂಗವಾಗಿ ಅರಣ್ಯ ಇಲಾಖೆ ತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ಕೇರಳಂ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಸಚಿವ ಶಿಬು ಬೇಬಿ ಜೋನ್ ಪ್ರಶಸ್ತಿ ಪ್ರದಾನ ಮಾಡಿದರು.
ಸಾರಿಗೆ ಸಚಿವ ಸಿ.ಪಿ ಜೋನ್ ಅಧ್ಯಕ್ಷತೆ ವಹಿಸಿದ್ದರು. ಶಿಬು ಬೇಬಿ ಉದ್ಘಾಟಿಸಿ ಪ್ರಶಸ್ತಿಪ್ರದಾನ ಮಾಡಿದರು. ಇಲಾಖೆಯ ಉನ್ನತ ಅಧಿಕಾರಿಗಳು, ವಿವಿಧ ಜಿಲ್ಲೆಯ ಪ್ರತಿನಿಧಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.


