HEALTH TIPS

ಅಹಮದಾಬಾದ್: ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್‌ ಮಾಡಿದ ವಿದ್ಯಾರ್ಥಿಗಳ ಅಮಾನತು

ಅಹಮದಾಬಾದ್: ನಗರದ ಬಿಜೆ ವೈದ್ಯಕೀಯ ಕಾಲೇಜಿನ ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಮಾಡಿದ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಗುಜರಾತ್ ಆರೋಗ್ಯ ಸಚಿವ ಪ್ರಫುಲ್ ಪನ್ಶೇರಿಯಾ ತಿಳಿಸಿದ್ದಾರೆ. 

ಆ ಕಾಲೇಜಿನ ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್‌ ಹೆಸರಿನಲ್ಲಿ ಮಾನಸಿಕ, ದೈಹಿಕ ಕಿರುಕುಳ ನೀಡುತ್ತಿದ್ದ ಹಿರಿಯ ವಿದ್ಯಾರ್ಥಿಗಳನ್ನು ಒಂದು ವರ್ಷದವರೆಗೆ ಅಮಾನತು ಮಾಡಲಾಗಿದೆ.

ಸರ್ಕಾರಿ ಕಾಲೇಜಿನ ಆಯಂಟಿ ರ‍್ಯಾಗಿಂಗ್‌ ಕಮಿಟಿ ಈ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿತ್ತು. ಆ ದೂರನ್ನು ಆಧರಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಫುಲ್ ಪನ್ಶೇರಿಯಾ ಹೇಳಿದ್ದಾರೆ.

ಭಾವನಗರ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಮೂಳೆ ಚಿಕಿತ್ಸಾ ವಿಭಾಗದ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿದ್ದಾರೆ. ರ‍್ಯಾಗಿಂಗ್‌ ಮಾಡುವುದು ಕಾನೂನು ಬಾಹಿರ. ಯಾರೇ ಈ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಳ್ಳತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಲೇಜಿನಲ್ಲಿ ಭಯಮುಕ್ತ ವಾತಾವರಣವನ್ನು ಕಾಪಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಹೀಯಾಳಿಸುವ ಬದಲಾಗಿ ಪರಸ್ಪರ ಗೌರವ, ಸ್ನೇಹದಿಂದಿರಿ. ಕಾಲೇಜುಗಳಲ್ಲಿ ಶಿಸ್ತು, ಒಳ್ಳೆಯ ನಡತೆ ಹಾಗೂ ವಿದ್ಯಾರ್ಥಿಗಳ ರಕ್ಷಣೆ ಎಲ್ಲಕ್ಕಿಂತ ಮುಖ್ಯವಾಗಿರುತ್ತದೆ. ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries