HEALTH TIPS

ಬಿರುಸಿನ ಮಳೆ(ರೆಡ್ ಅಲರ್ಟ್)-ಇಂದು ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥಗಳಿಗೆ ರಜೆ

ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜೂ. 6ರಂದು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು,  ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಐಎಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‍ಇ, ಸಿಬಿಎಸ್‍ಇ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಮದರಸಾದಂತಹ ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ. ವಸತಿ ಶಾಲೆಗಳಿಗೆ ರಜೆ ಅನ್ವಯವಾಗುವುದಿಲ್ಲ. ಪೂರ್ವ ನಿಗದಿತ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಣ್ಣೂರು, ಕೋಯಿಕ್ಕೋಡ್, ವಯನಾಡು, ಮಲಪ್ಪುರಂ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries