ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ಆಯುರ್ವೇದ ಆಸ್ಪತ್ರೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಬದಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ. ಡಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೇಹದ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಯೋಗವು ಸಹಕಾರಿ. ನಿರಂತರ ಯೋಗ ಮಾಡುವುದರಿಂದ ರೋಗನಿರೋಧಕ ಶಕ್ತಿಯು ವೃದ್ಧಿಸುತ್ತದೆ ಎಂದರು. ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಇಲಾಖೆಯ ಅಧಿಕೃತರು ಪಾಲ್ಗೊಂಡಿದ್ದರು.

.jpg)
