ಹೈದರಾಬಾದ್: ನೀಟ್ ಪರೀಕ್ಷೆ ಬರೆಯಬೇಕಿದ್ದ 19 ವರ್ಷದ ವಿದ್ಯಾರ್ಥಿನಿ ಪರೀಕ್ಷೆಗೂ ಒಂದು ದಿನ ಮೊದಲೇ(ಶನಿವಾರ) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
ಮಿಯಾಪುರದ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ಸೋದರಿಯರ ಜೊತೆ ವಾಸವಿದ್ದ ಆಕೆ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರಿಗೆ ಡೆತ್‌ನೋಟ್ ಸಿಕ್ಕಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆಯಲಾಗಿದೆ.
ನೀಟ್ ಪರೀಕ್ಷಾ ಒತ್ತಡ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಈ ಹಿಂದೆ ನಡೆದಿದ್ದ ಪರೀಕ್ಷೆ ರದ್ದಾದ ಬಳಿಕ ಮನನೊಂದು ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.


