HEALTH TIPS

ತಮಿಳುನಾಡು ಸೀಫುಡ್ ಘಟಕದಲ್ಲಿ ಅನಿಲ ಸೋರಿಕೆ: ಏಳು ಜನ ಸಾವು; ಹಲವರು ಗಂಭೀರ

 ಚೆನ್ನೈ: ತಮಿಳುನಾಡಿನ ಸೀಫುಡ್ ರಫ್ತು ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಏಳು ಜನ ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. 


ತಿರುವಳ್ಳೂರು ಜಿಲ್ಲೆಯ ಪೆರಿಯಪಾಳ್ಯಂದಲ್ಲಿರುವ ಸೀಫುಡ್ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದೆ.

60ಕ್ಕೂ ಹೆಚ್ಚು ಕಾರ್ಮಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ 10 ಜನರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ ಎಂದು ' ದಿ ಹಿಂದೂ' ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮೃತಪಟ್ಟಿರುವ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಹೊರ ರಾಜ್ಯದವರು ಎಂದು ಸಚಿವ ಆರ್. ಕುಮಾರ್ ಖಚಿತಪಡಿಸಿದ್ದಾರೆ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ವಿಜಯ್ ಆದೇಶಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತೀವ್ರ ಅಸ್ವಸ್ಥತೆ...

ಅನಿಲ ಸೋರಿಕೆಯಾಗುತ್ತಿದ್ದಂತೆ ಕಾರ್ಮಿಕರಲ್ಲಿ ಉಸಿರಾಟದ ತೊಂದರೆ, ತಲೆ ಸುತ್ತು ಮತ್ತು ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್‌ಗಳ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ತೀವ್ರವಾಗಿ ಅಸ್ವಸ್ಥಗೊಂಡಿರುವ ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತನಿಖೆಗೆ ಸಮಿತಿ ರಚನೆ: ಘಟನೆಯ ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಕೈಗಾರಿಕಾ ಸುರಕ್ಷತೆ ಮಂಡಳಿ, ಆರೋಗ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಈ ಸಮಿತಿಯಲ್ಲಿದ್ದಾರೆ. ಸಮಿತಿಯು 24 ಗಂಟೆಗಳ ಒಳಗಾಗಿ ಮಧ್ಯಂತರ ವರದಿಯನ್ನು ಹಾಗೂ ಮೂರು ದಿನಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಅನಿಲ ಸೋರಿಕೆಗೆ ಕಾರಣ: ಸಂಸ್ಕರಣಾ ಘಟಕದಲ್ಲಿ ಯಂತ್ರವೊಂದರ ಕವಾಟದಲ್ಲಿ ತಾಂತ್ರಿಕ ದೋಷದಿಂದಾಗಿ ಅಮೋನಿಯಾ ಅನಿಲ ಸೋರಿಕೆಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದನ್ನು ಸಾಮಾನ್ಯವಾಗಿ ಇಂತಹ ಕೋಲ್ಡ್ ಸ್ಟೋರೇಜ್‌ಗಳಲ್ಲಿ ಬಳಸಲಾಗುತ್ತದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries