HEALTH TIPS

ಮಣಿಪುರದಲ್ಲಿ ಬಂಡುಕೋರರ ದಾಳಿ: ಇಬ್ಬರು ಸಾವು

 ಇಂಫಾಲ್‌: ಮಣಿಪುರದ ಕಾಮ್‌ಜೋಂಗ್‌ ಜಿಲ್ಲೆಯ ಗ್ರಾಮವೊಂದರ ಮೇಲೆ ಬಂಡುಕೋರರು ಗುರುವಾರ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವು ಮನೆಗಳನ್ನು ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 


ಕುಲ್ತುಹ್‌ ಕುಕಿ ಎಂಬ ಸಣ್ಣ ಹಳ್ಳಿಯಲ್ಲಿ ಬೆಳಿಗ್ಗೆ 4.55ರ ಸುಮಾರಿಗೆ ಶಂಕಿತ ಬಂಡುಕೋರರು ದಾಳಿ ನಡೆಸಿದ್ದಾರೆ.

ಮ್ಯಾನ್ಮಾರ್‌ ಗಡಿ ಪ್ರದೇಶದ ಬಳಿ ಸಮೀಪದ 30 ಮನೆಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳು ಭೇಟಿ ನೀಡಿದ್ದು, ಆರೋಪಿಗಳ ಸುಳಿವು ಪತ್ತೆಯಾಗಿಲ್ಲ.

'ಕುಕಿ ಬ್ಯಾಪ್ಟಿಸ್ಟ್ ಕನ್ವೆನ್ಷನ್‌' ಈ ಹತ್ಯೆಯನ್ನು ಖಂಡಿಸಿದೆ ಮತ್ತು ನಾಗರಿಕ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದೆ.

ಕುಲ್ತುಹ್‌ ಚರ್ಚ್‌ನ ಮುಖ್ಯ ಧರ್ಮಾಧಿಕಾರಿ ಮತ್ತು ಯುವ ವಿಭಾಗದ ಅಧ್ಯಕ್ಷರನ್ನು ಹತ್ಯೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಡಾ. ಲ್ಯಾಮ್ಟಿಂಗ್‌ಥಾಂಗ್‌ ಹಾವೋಕಿಪ್ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ ಮಿತಿ ಮೀರಿದೆ ಎಂದು ಆರೋಪಿಸಿದ್ದಾರೆ.

'ಮಣಿಪುರ ಸರ್ಕಾರ ಮೂಕ ಪ್ರೇಕ್ಷಕನಾಗುವುದಿಲ್ಲ'

ದೌರ್ಜನ್ಯಗಳನ್ನು ನೋಡಿ ಮಣಿಪುರ ಸರ್ಕಾರ ಮೂಕಪ್ರೇಕ್ಷಕನಾಗಿ ಉಳಿಯುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ವೈ.ಖೇಮಚಂದ್ ಸಿಂಗ್ ಗುರುವಾರ ಹೇಳಿದ್ದಾರೆ.

ಕಾಂಗ್‌ಪೋಕ್ಪಿ ಜೆಲ್ಲೆಯಲ್ಲಿ ಸಶಸ್ತ್ರ ಗುಂಪುಗಳು ಅಪರಿಸಿದ್ದ ನಾಗಾ ಸಮುದಾಯದ ಜನರದ್ದೆಂದು ಶಂಕಿಸಲಾದ ಆರು ಜನರ ಮೃತದೇಹಗಳನ್ನು ಪೊಲೀಸರು ಪತ್ತೆಹಚ್ಚಿದ ನಂತರ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.

ಮೇ 13ರಂದು ಕಾಂಗ್‌ಪೋಕ್ಪಿ ಜಿಲ್ಲೆಯ ಲೈಲಾನ್ ವೈಫೆಯಿ ಗ್ರಾಮದಿಂದ ನಾಗಾ ಸಮುದಾಯದ ಆರು ಜನರನ್ನು ಅಪಹರಿಸಲಾಗಿತ್ತು. ಮುಖ್ಯಮಂತ್ರಿ ನೀಡಿದ ಅಧಿಕೃತ ಹೇಳಿಕೆಯಲ್ಲಿ 'ರಾಜ್ಯ ಸರ್ಕಾರ ಇಂತಹ ಹಿಂಸಾಚಾರವನ್ನು ಸಹಿಸುವುದಿಲ್ಲ. ಕೊಲೆಗೆ ಕಾರಣರಾದ ಅಪರಾಧಿಗಳನ್ನು ಬಂಧಿಸಿ ಕಾನೂನಿನ ಪ್ರಕಾರ ಶಿಕ್ಷಿಸಲಾಗುವುದು' ಎಂದು ಹೇಳಿದ್ದಾರೆ.

-ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪ ನಾಯಕ'ತ್ವರಿತ-ನಿಷ್ಪಕ್ಷಪಾತ ತನಿಖೆ ನಡೆಸಿ' ನಾಗಾ ನಾಗರಿಕರ ಹತ್ಯೆಯ ಬಗ್ಗೆ ತ್ವರಿತ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries