ಸಮರಸ ಚಿತ್ರಸುದ್ದಿ: ಕಾಸರಗೋಡು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕಾಸರಗೋಡು ನಾಯಮರ್‍ಮೂಲೆ ಟಿ.ಐ. ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಪೆÇಲೀಸ್ ಕೆಡೆಟ್‍ಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಎಂ. ದೇವದಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್‍ಪಿಸಿ ಕೆಡೆಟ್‍ಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.


