HEALTH TIPS

ಒಮಾನ್ ಕರಾವಳಿಯಲ್ಲಿ ವಾರದಲ್ಲಿ ಮೂರನೇ ದಾಳಿ: ಪರಿಸ್ಥಿತಿ ಉದ್ವಿಗ್ನ

ಮಸ್ಕತ್‌/ನವದೆಹಲಿ : ಮತ್ತೆ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪರಿಸ್ಥಿತಿ ತಿಳಿಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. 


ಈ ವಾರದಲ್ಲಿ ವರದಿಯಾದ ಮೂರನೇ ದಾಳಿ ಇದಾಗಿದೆ. ಇದಕ್ಕೂ ಮುನ್ನ, ಭಾರತೀಯ ಸಿಬ್ಬಂದಿಗ ಳಿದ್ದ ಎಂಟಿ ಮಾರಿವೆಕ್ಸ್ ಹಾಗೂ ಮತ್ತೊಂದು ಹಡಗಿನ ಮೇಲೆ ದಾಳಿ ನಡೆಸಲಾಗಿತ್ತು.

ಈ ಬೆನ್ನಲ್ಲೇ, ಒಮಾನ್‌ ಬಂದರು ಸಮೀಪ ಭಾರತದ ಮತ್ತೊಂದು ನೌಕೆಯ ಮೇಲೆ ದಾಳಿ ನಡೆದಿರುವುದಾಗಿ ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಗುರುವಾರ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ.

ಇಲ್ಲಿನ ಕರಾವಳಿಯಲ್ಲಿ ಪಲಾವು ದೇಶದ ಧ್ವಜ ಹೊಂದಿದ್ದ ನೌಕೆಯ ಮೇಲೆ ಅಮೆರಿಕ ನೇತೃತ್ವದ ಪಡೆಗಳು ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ ಮರುದಿನವೇ ಈ ದಾಳಿ ನಡೆದಿರುವುದು ಆತಂಕವನ್ನು ಹೆಚ್ಚಿಸಿದೆ.

ನಿರಂತರ ನಿಗಾ...

ಇಂದು ದಾಳಿಗೆ ಒಳಗಾದ ನೌಕೆಯಲ್ಲಿ ಭಾರತೀಯ ಸಿಬ್ಬಂದಿ ಇದ್ದರೇ ಎಂಬ ಬಗ್ಗೆ ಭಾರತೀಯ ರಾಯಭಾರ ಕಚೇರಿ ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ ಎಂದು ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ತಿಳಿಸಿದೆ.

ದಾಳಿಗೆ ಒಳಗಾದ ನೌಕೆಯನ್ನು 'ಎಂಟಿ ಜಲವೀರ್' ಎಂದು ಗುರುತಿಸಲಾಗಿದೆ ಎಂದು ಭಾರತೀಯ ನೌಕಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. 








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries