HEALTH TIPS

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಾಲಂದ ಕಾಲೇಜಿನಲ್ಲಿ ಯೋಗ ಶಿಬಿರ

ಪೆರ್ಲ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೆರ್ಲದ ನಾಲಂದ ಕಾಲೇಜ್ ಆಫ್ ಆಟ್ರ್ಸ್ ಅಂಡ್ ಸೈನ್ಸ್‍ನಲ್ಲಿ ವಿಶೇಷ ಯೋಗ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 


ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಮೋಹನ ಕುಂಟಾರ್ ಉದ್ಘಾಟಿಸಿ, ಯೋಗವು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಯೋಗ ಗುರು ಪುಂಡರೀಕಾಕ್ಷ ಬೆಳ್ಳೂರು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ಮಹತ್ವವನ್ನು ವಿವರಿಸಿದರು. ಅವರು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಯೋಗಾಭ್ಯಾಸವನ್ನು ನಡೆಸಿಕೊಟ್ಟು, ಆರೋಗ್ಯಕರ ಜೀವನಶೈಲಿಗೆ ಯೋಗದ ಅಗತ್ಯತೆಯನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಯೋಗಾಭ್ಯಾಸದ ಮೂಲಕ ದೈಹಿಕ ಕ್ಷಮತೆ, ಏಕಾಗ್ರತೆ ಹಾಗೂ ಮಾನಸಿಕ ಶಾಂತಿಯನ್ನು ವೃದ್ಧಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಲಾಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries