ಕಾಸರಗೋಡು: ಪರಿಸರ ಸಂರಕ್ಷಣೆ ಮತ್ತು ಹಸಿರೀಕರಣದ ಯೋಜನೆಯ ಅಂಗವಾಗಿ ಜಿಲ್ಲೆಯಲ್ಲಿ ಸಸಿಗಳನ್ನು ಉಚಿತವಾಗಿ ವಿತರಿಸಲು ಸಿದ್ಧತೆ ನಡೆಯುತ್ತಿದೆ. ಹಸಿರು ಕೇರಳ ಮಿಷನ್‍ಗಾಗಿ ಕಾಸರಗೋಡು ಅರಣ್ಯ ಮತ್ತು ವನ್ಯಜೀವಿ ಇಲಾಖೆಯ ಅಧೀನದಲ್ಲಿ ಸಾಮಾಜಿಕ ಅರಣ್ಯ ವಿಭಾಗದಿಂದ ಉತ್ಪಾದಿಸಿರುವ ಸಸಿಗಳನ್ನು ವಿತರಿಸಲು ಸಿದ್ಧತೆ ನಡೆಯುತ್ತಿದೆ.
'ಹಸಿರು ನಮ್ಮ ಭವಿಷ್ಯ' ಎಂಬ ಸಂದೇಶವನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಯನ್ವಯ ಶಾಲಾ ಕಾಲೇಜುಗಳು, ಇತರ ಸಂಸ್ಥೆಗಳು ಮತ್ತು ಸ್ವಯಂಸೇವಾ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ಒದಗಿಸಲಾಗುವುದು.
ಸಸಿಗಳ ಅಗತ್ಯವಿರುವವರು ಈ ಕೆಳಗಿನ ದೂರವಾಣಿ ಸಂಖ್ಯೆ (9446088056 ಮತ್ತು 8547603838) ಅಥವಾ navakeralamksd@gmail.com, rfosphosdurgrangeoffice@gmail.com ಎಂಬ ಇಮೇಲ್ ಮೂಲಕ ಸಂಪರ್ಕಿಸಬಹುದಾಗಿದೆ. ಇಮೇಲ್ ಮೂಲಕ ಅರ್ಜಿ ಸಲ್ಲಿಸುವವರು ಅರ್ಜಿಯಲ್ಲಿ ಅಗತ್ಯವಿರುವ ಸಸಿಗಳ ಸಂಖ್ಯೆ ಮತ್ತು ತಮ್ಮ ಸಂಪರ್ಕ ದೂರವಾಣಿ ಸಂಖ್ಯೆಯನ್ನು ನಿಖರವಾಗಿ ನಮೂದಿಸುವಂತೆ ಪ್ರಕಟಣೆ ತಿಳಿಸಿದೆ.



