HEALTH TIPS

ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಉಲ್ಲಂಘನೆ: ವಿಶ್ವಸಂಸ್ಥೆಗೆ ಪಾಕಿಸ್ತಾನ ಪತ್ರ

ಇಸ್ಲಾಮಾಬಾದ್: ಭಾರತದಿಂದ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಉಲ್ಲಂಘನೆ ಕುರಿತಂತೆ ಗಮನಹರಿಸುವಂತೆ ಪಾಕಿಸ್ತಾನದ ಉಪ ಪ್ರಧಾನಿ ಇಶಾಕ್ ದಾರ್ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಆಗಿದ್ದ ಒಪ್ಪಂದವನ್ನು ಭಾರತವು 2025ರ ಏಪ್ರಿಲ್‌ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದು 26 ಜನರ ಹತ್ಯೆಯಾದ ಬಳಿಕ ರದ್ದುಪಡಿಸಿತ್ತು.

ಈ ಒಪ್ಪಂದವು 1960 ರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಿಂಧೂ ನದಿ ಮತ್ತು ಅದರ ಉಪನದಿಗಳ ನೀರಿನ ಹಂಚಿಕೆ, ಬಳಕೆಯನ್ನು ನಿಯಂತ್ರಿಸುತ್ತಿದೆ.

ಇಸ್ಲಾಮಾಬಾದ್‌ನ ಕಳವಳಗಳನ್ನು ಎತ್ತಿ ತೋರಿಸಲು ದಾರ್ ಅವರ ಪತ್ರವನ್ನು ಭದ್ರತಾ ಮಂಡಳಿಯ ಅಧ್ಯಕ್ಷ ಲಿಯೊನರ್ ಜಲಬಾಟ ಟೊರೆಸ್‌ಗೆ ತಲುಪಿಸಿರುವುದಾಗಿ ವಿಶ್ವಸಂಸ್ಥೆಗೆ ಪಾಕಿಸ್ತಾನದ ಖಾಯಂ ಪ್ರತಿನಿಧಿ ಅಸಿಮ್ ಇಫ್ತಿಕರ್ ಅಹ್ಮದ್ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಚೆನಾಬ್ ನದಿಗೆ ಭಾರತದ ಎರಡು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತುರ್ತು ಗಮನ ಸೆಳೆಯಲು ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

ದಕ್ಷಿಣ ಏಷ್ಯಾದ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ನಾನು ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಏಪ್ರಿಲ್‌ನಲ್ಲಿಯೂ ದಾರ್ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಇದೇ ರೀತಿಯ ಪತ್ರವನ್ನು ಬರೆದಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries