ಇಸ್ಲಾಮಾಬಾದ್ : ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದರು.
ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಹಾಗೂ ಇರಾನ್‌ನ ಸಹಿ ಹಾಕಿರುವ ಶಾಂತಿ ಒಪ್ಪಂದದ ಎಲ್ಲಾ ಷರತ್ತುಗಳ ಅನುಷ್ಠಾನ, ಉಭಯ ರಾಷ್ಟ್ರಗಳ ಹಿತಾಸಕ್ತಿಗೆ ಅನುಗುಣವಾದ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸುವುದು ಈ ಭೇಟಿಯ ಉದ್ದೇಶವಾಗಿತ್ತು.

