HEALTH TIPS

ಪ್ರಚೋದನಕಾರಿ ಹೇಳಿಕೆ: ಬಂಗಾಳ ಸಿಐಡಿ ಎದುರು ವಿಚಾರಣೆಗೆ ಹಾಜರಾದ ಅಭಿಷೇಕ್

 ಕೋಲ್ಕತ್ತ: ಚುನಾವಣಾ ರ‍್ಯಾಲಿಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿ ಅವರು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಮಂಗಳವಾರ ಹಾಜರಾಗಿದ್ದಾರೆ. 


ಇದಕ್ಕೂ ಮೊದಲು ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದ ನಕಲಿ ಸಹಿ ಪ್ರಕರಣದಲ್ಲಿ ಟಿಎಂಸಿ ಸಂಸದ ಅಭಿಷೇಕ್‌ ಅವರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು.

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆಯೂ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಸಾಮಾಜಿಕ ಕಾರ್ಯಕರ್ತ ರಾಜೀಬ್ ಸರ್ಕಾರ್ ದಾಖಲಿಸಿದ ದೂರಿನ ಅನ್ವಯ, ಎಫ್‌ಐಆರ್ ದಾಖಲಾಗಿದೆ.

ಈ ದೂರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದ್ದಾಗಿದೆ. ಬಿಎನ್‌ಎಸ್ ಹಾಗೂ ಜನಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries