HEALTH TIPS

ಅಮೆರಿಕದೊಂದಿಗೆ ಒಪ್ಪಂದ ಅಂತಿಮ ಹಂತಕ್ಕೆ ಇನ್ನೂ ತಲುಪಿಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ

 ಟೆಹ್ರಾನ್: ಅಮೆರಿಕದೊಂದಿಗೆ ನಡೆಯುತ್ತಿರುವ ಮಾತುಕತೆಗಳ ಒಪ್ಪಂದ ಅಂತಿಮಗೊಳ್ಳುವ ಹಂತಕ್ಕೆ ಇನ್ನೂ ತಲುಪಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಹೇಳಿದ್ದಾರೆ.


ಒಪ್ಪಂದದ ನಿಯಮಗಳನ್ನು ಇರಾನಿನ ಮಾಧ್ಯಮಗಳಿಗೆ ಸೋರಿಕೆ ಮಾಡಲಾಗಿದೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಅನ್ನು ಟೀಕಿಸಿದ ಕೆಲವೇ ಹೊತ್ತಿನ ಬಳಿಕ ಅರಾಘ್ಚಿ ಈ ಪ್ರತಿಕ್ರಿಯೆ ನೀಡಿದ್ದಾರೆ.

"ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ. ಅಂತಿಮಗೊಳಿಸುವವರೆಗೆ ಅದರ ವಿಷಯದ ಬಗ್ಗೆ ಮಾಧ್ಯಮಗಳು ಊಹಾಪೋಹಗಳನ್ನು ಹರಡುವುದನ್ನು ನಿಲ್ಲಿಸಬೇಕು" ಎಂದು ಅವರು ಸಾಮಾಜಿಕ ಜಾಲತಾಣ ಘಿನಲ್ಲಿ ತಿಳಿಸಿದ್ದಾರೆ.

ಒಪ್ಪಂದದ ಎಲ್ಲ ವಿವರಗಳನ್ನು ಸೂಕ್ತ ಸಮಯದಲ್ಲಿ ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ಒಪ್ಪಂದದ ಕರಡು ನಿಯಮಗಳು ಇರಾನಿನ ಮಾಧ್ಯಮಗಳಿಗೆ ಸೋರಿಕೆಯಾಗಿವೆ ಎಂದು ಟ್ರಂಪ್ ಆರೋಪಿಸಿದ್ದ ಬೆನ್ನಲ್ಲೇ ಅರಾಘ್ಚಿ ಈ ಹೇಳಿಕೆ ನೀಡಿದ್ದಾರೆ. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries