ಪೆರ್ಲ: ಪೆರ್ಲದ ಬ್ರಹ್ಮ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ನಡೆಯಲಿರುವ ಸಂಘದ ಮಹಾಸಭೆ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದ ಸಮಾಲೋಚನಾ ಸಭೆ ಪೆರ್ಲ ಪಡ್ರೆ ಸಭಾ ಭವನದಲ್ಲಿ ಜರಗಿತು.
ಸಂಘದ ಅಧ್ಯಕ್ಷ ಬಿ. ಪಿ. ಶೇಣಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನವಾದ ಆಗಸ್ಟ್ 28ರಂದು ಶ್ರೀನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಪೆರ್ಲ ವ್ಯಾಪಾರಿ ಭವನದಲ್ಲಿ ಜರುಗಿಸಲು ತೀರ್ಮಾನಿಸಲಾಯಿತು. ಸಮಾರಂಭದಲ್ಲಿ ಮಹಿಳಾ ಸಂಘದಿಂದ ಭಜನೆ, ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ, ಸಮಾಜದಲ್ಲಿ ಗುರುತಿಸಲ್ಪಟ್ಟ ಹಿರಿಯರಿಗೆ ಗೌರವಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಇತ್ಯಾದಿ ಕಾರ್ಯಕ್ರಮ ಆಯೋಜಿಸುವುದರ ಜತೆಗೆ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಲು ನಿರ್ಧರಿಸಲಾಯಿತು. ಈ ಬಗ್ಗೆ ಚರ್ಚಿಸಲು ಮುಂದಿನ ಸಮಾಲೋಚನಾ ಸಭೆಯನ್ನು ಜುಲೈ 12ರಂದು ಪೆರ್ಲ ಪಡ್ರೆ ಸಭಾ ಭವನದಲ್ಲಿ ನಡೆಸುವುದು ಹಾಗೂ ಸಂಘದ ಮಹಾಸಭೆಯನ್ನು ಗುರುಜಯಂತಿ ಕಾರ್ಯಕ್ರಮದ ನಂತರ ನಡೆಸಲು ತೀರ್ಮಾನಿಸಲಾಯಿತು.
ರಾಮಣ್ಣ ಪೂಜಾರಿ ಬಾಂಕಾನ, ರಾಜಪ್ಪ ಕಾಟುಕುಕ್ಕೆ, ಪ್ರವೀಣ್ ಕುಮಾರ್ ಅರೆಮಂಗಿಲ, ನಾರಾಯಣ ಪೂಜಾರಿ ಶೇಣಿ, ಲಲಿತಾ ಅರೆಮಂಗಿಲ, ಕುಸುಮ ನಡುಬೈಲು, ಹರ್ಷ ಕುಮಾರ್ ನಲ್ಕ, ಹರಿಣಾಕ್ಷಿ ಮಣಿಯಂಪಾರೆ, ಐತಪ್ಪ ಪೂಜಾರಿ ಬಲ್ತಕಲ್ಲು, ಸ್ವೀಕೃತಿ ಕಾನ ್ತುಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಅಖಿಲೇಶ್ ಕಾನ ಸ್ವಾಗತಿಸಿದರು. ಕೋಶಾಧಿಕಾರಿ ಪದ್ಮನಾಭ ಸುವರ್ಣ ಬಜಕೂಡ್ಲು ವಂದಿಸಿದರು.

