HEALTH TIPS

ಆಟೋದರ ಹೆಚ್ಚಳ ಆಗ್ರಹಿಸಿ ಜಿಲ್ಲಾ ಆಟೋ ರಿಕ್ಷಾ ಮಜ್ದೂರ್ ಸಂಘದಿಂದ ಪ್ರತಿಭಟನೆ

ಕಾಸರಗೋಡು: ವಿವಿಧ ಬೇಡಿಕೆ ಮುಂದಿರಿಸಿ ಕಾಸರಗೋಡು ಜಿಲ್ಲಾ ಆಟೋ ರಿಕ್ಷಾ ಮಜ್ದೂರ್ ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಾಸರಗೋಡು ತಾಲೂಕು ಕಚೇರಿ ಎದುರು  ಪ್ರತಿಭಟನಾ ಧರಣಿ ನಡೆಸಲಾಯಿತು. 


ಆಟೋರಿಕ್ಷಾ ದರ  ಹೆಚ್ಚಿಸಬೇಕು,  ಸಬ್ಸಿಡಿ ದರದಲ್ಲಿ ಆಟೋ ಕಾರ್ಮಿಕರಿಗೆ ಪೆಟ್ರೋಲ್ ಉತ್ಪನ್ನಗಳನ್ನು ವಿತರಿಸಬೇಕು,  ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‍ಟಿ ವ್ಯಾಪ್ತಿಗೆ ಸೇರಿಸಲು ಕೇರಳ ಸರ್ಕಾರ ಶಿಫಾರಸು ಮಾಡಬೇಕು, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ರಾಜ್ಯ ವಿಧಿಸಿರುವ ಹೆಚ್ಚಿನ ತೆರಿಗೆಯನ್ನು ಕಡಿತಗೊಳಿಸಬೇಕು ಮುಂತಾದ ಬೇಡಿಕೆ ಮುಂದಿರಿಸಿ ಧರಣಿ ನಡೆಸಲಾಯಿತು. 

ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಕಾರ್ಯದರ್ಶಿ ಭರತನ್ ಕಲ್ಯಾಣ್ ರಸ್ತೆ ಧರಣಿ ಉದ್ಘಾಟಿಸಿದರು. ಯೂನಿಯನ್ ಜಿಲ್ಲಾಧ್ಯಕ್ಷ ಶಿವರಾಮನ್ ಅಧ್ಯಕ್ಷತೆ ವಹಿಸಿದ್ದರು.  ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಾಬು ಮುಖ್ಯ ಭಾಷಣ ಮಾಡಿದರು. ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ಭಾಸ್ಕರನ್ ಪೆÇಯಿನಾಚಿ ಮತ್ತು ಬಿಎಂಎಸ್ ಕಾಸರಗೋಡು ಪ್ರಾದೇಶಿಕ ಕಾರ್ಯದರ್ಶಿ ಬಾಬುಮೋನ್ ಉಪಸ್ಥಿತರಿದ್ದರು. ಚೆಂಗಳ, ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಎ ಕೇಶವ, ಎಸ್ ಕೆ ಉಮೇಶ್, ದಿವಾಕರ ರೈ ಕುಂಬಳೆ, ಕಮಲಾಕ್ಷ ಉಪ್ಪಳ, ಶ್ರೀಧರ ಹೊಸಂಗಡಿ ಉಪಸ್ಥಿತರಿದ್ದರು.  ಆಟೋರಿಕ್ಷಾ ಮಜ್ದೂರ್ ಸಂಘದ ಬಿಎಂಎಸ್ ಜಿಲ್ಲಾ ಕೋಶಾಧಿಕಾರಿ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷ ಕುಞÂಕಣ್ಣನ್ ಅರಯಲಿಂಗಲ್ ವಂದಿಸಿದರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries