ಉಪ್ಪಳ: ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಗಲ್ಪಾಡಿ ಗ್ರಾ.ಪಂ.ಸದಸ್ಯೆ ನಸಿಯಾ ಅಜೀಜ್ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಚಿತ್ರಾವತಿ ಚಿಗುರುಪಾದೆ ಸ್ವಾಗತಿಸಿ, ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ಮಕ್ಕಳಿಗೆ ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಲ್ಪಾಡಿ ಗ್ರಾಮ ಪಂಚಾಯತಿ ಸರ್ಕಾರಿ ಹೋಮಿಯೋ ಡಿಸ್ಪೆನ್ಸರಿ ಆಯುಷ್ಮಾನ್ ಆರೋಗ್ಯ ಮಂದಿರದ ಯೋಗ ತರಬೇತುದಾರೆ ತಾರಾ ಎ.ಕೆ. ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಹಾಗೂ ಪ್ರಾಣಾಯಾಮಗಳ ಪ್ರಾಯೋಗಿಕ ತರಬೇತಿಯನ್ನು ನೀಡಿದರು. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಯೋಗಾಭ್ಯಾಸಗಳಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದಲ್ಲಿ ಬಿ.ಆರ್.ಸಿ. ತರಬೇತುದಾರ ಸಜಿತ್ ಹಾಗೂ ಶಾಲೆಯ ಹಿರಿಯ ಶಿಕ್ಷಕ ರಿಯಾಜ್ ಎಂ.ಎಸ್. ಪೆರಿಂಗಡಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಿಕ್ಷಕಿ ಐಷತ್ ಸೈನಾಝ್
ಯೋಗದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಏಕಾಗ್ರತೆ, ಶಿಸ್ತು, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವವನ್ನು ಬೆಳೆಸುವುದರ ಬಗ್ಗೆ ಅರಿವನ್ನು ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಶಾಲಾ ಅರೆಬಿಕ್ ಕ್ಲಬ್ ವತಿಯಿಂದ ಯೋಗದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು ಹಾಗೂ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಬಣ್ಣ ಹಚ್ಚುವ, ಕ್ವಿಜ್ ಮುಂತಾದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕ ಅಬ್ದುಲ್ ಬಶೀರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಐಶ್ವರ್ಯ ವಂದಿಸಿದರು.

.jpg)
.jpg)
