ಮೆಂಡರ್/ಜಮ್ಮು: ಗಡಿ ನಿಯಂತ್ರಣ ರೇಖೆ ದಾಟಿ ಭಾರತದ ಭೂಪ್ರದೇಶ ಪ್ರವೇಶಿಸಿದ್ದ ಪಾಕಿಸ್ತಾನದ 14 ವರ್ಷದ ಬಾಲಕನೊಬ್ಬನನ್ನು ಸೇನಾ ಸಿಬ್ಬಂದಿ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
'ಮೆಂಡರ್ ವಲಯದ ನಾಗರಿ ಟೇಕರಿಯ ಮುಂಚೂಣಿ ಪ್ರದೇಶದಲ್ಲಿ ಗಡಿ ದಾಟಿದ ಕೂಡಲೇ ಬಾಲಕನನ್ನು ಜಾಗೃತ ಪಡೆಗಳು ವಿಚಾರಣೆ ನಡೆಸಿವೆ.
ಬಾಲಕ ಆಕಸ್ಮಿಕವಾಗಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಗಡಿ ನಿಯಂತ್ರಣ ರೇಖೆ ದಾಟಿ ಒಳಬಂದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಭದ್ರತಾ ಸಂಸ್ಥೆಗಳು ಹೆಚ್ಚಿನ ವಿಚಾರಣೆ ಕೈಗೊಂಡಿವೆ. ವಿಚಾರಣೆ ಬಳಿಕ ಅವನನ್ನು ಸ್ವದೇಶಕ್ಕೆ ವಾಪಸ್ ಕಳುಹಿಸುವ ಸಾಧ್ಯತೆ ಇದೆ' ಎಂದು ಅವರು ತಿಳಿಸಿದ್ದಾರೆ.'

