HEALTH TIPS

ದೆಹಲಿಯಲ್ಲಿ ಸಿಎಂ ವಿಜಯ್ ತಂಗಿದ್ದ 'ತಮಿಳುನಾಡು ಭವನ'ದಲ್ಲಿ ಬೆಂಕಿ ಅವಘಡ

 ನವದೆಹಲಿ: ದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ತಮಿಳುನಾಡು ಭವನದಲ್ಲಿ ಗುರುವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್‌ ಅವರು ನೀತಿ ಆಯೋಗದ ಸಭೆಗೆ ಭವನದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಈ ಘಟನೆ ನಡೆದಿದೆ.


ಅನಿಲ ಸೋರಿಕೆಯಿಂದಾಗಿ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಆದಾಗ್ಯೂ, ಭಾರಿ ಭದ್ರತೆ ಇರುವ ಈ ಆವರಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ನೀತಿ ಆಯೋಗದ ಸಭೆಯಲ್ಲಿ ಸಿಎಂ ಭಾಗಿ:

ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಸಿಎಂ ವಿಜಯ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries