HEALTH TIPS

ಹಿರಿಯ ಪತ್ರಕರ್ತ, ಲೇಖಕ, ಚಲನಚಿತ್ರ ನಿರ್ದೇಶಕ ಎನ್.ಎಸ್. ಶಂಕರ್ ನಿಧನ

ಬೆಂಗಳೂರು: ಹಿರಿಯ ಪತ್ರಕರ್ತ, ಲೇಖಕ, ಕನ್ನಡ ಚಲನಚಿತ್ರ ನಿರ್ದೇಶಕರೂ ಆಗಿದ್ದ ಎನ್.ಎಸ್. ಶಂಕರ್ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ನಿನ್ನೆ ಕೊನೆಯುಸಿರೆಳೆದಿದ್ದಾರೆ.

ಕ್ರೀಯಾಶೀಲ ಪತ್ರಕರ್ತರಾಗಿದ್ದ ಅವರು ಮುಂಗಾರು, ಲಂಕೇಶ್ ಪತ್ರಿಕೆ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದರು.

ಸೃಜನಶೀಲ ಲೇಖಕರೂ ಆಗಿದ್ದ ಅವರು ಚಲನಚಿತ್ರ ನಿರ್ದೇಶಕರಾಗಿಯೂ ಹೆಸರುವಾಸಿಯಾಗಿದ್ದರು.

ಅವರು 1997ರಲ್ಲಿ ನಿರ್ದೇಶಿಸಿದ ತಮ್ಮ ಚೊಚ್ಚಲ ಸಿನೆಮಾ 'ಉಲ್ಟಾ ಪಲ್ಟಾ' ಭಾರೀ ಯಶಸ್ಸು ತಂದುಕೊಟ್ಟಿತು. ವಿಲಿಯಂ ಶೇಕ್ಸ್ ಪಿಯರ್ ಅವರ ಪ್ರಸಿದ್ಧ ಕೃತಿ 'ದಿ ಕಾಮಿಡಿ ಆಫ್ ಎರರ್ಸ್' ಆಧಾರಿತ ಈ ಹಾಸ್ಯ ಪ್ರಧಾನ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇಂದಿಗೂ ಗುರುತಿಸಲ್ಪಟ್ಟಿದೆ.

ಅವರು ಸಾಂಸ್ಕೃತಿಕ ಚಳವಳಿಗಳು ಮತ್ತು ಬಂಡಾಯ ಸಾಹಿತ್ಯದ ತತ್ವಗಳಿಗೆ ಸದಾ ಧ್ವನಿಯಾಗಿದ್ದರು. 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಎನ್.ಎಸ್. ಶಂಕರ್, ಇತ್ತೀಚೆಗೆ 'ಈಗ…' ಎಂಬ ಮೂರು ಸಣ್ಣ ಕಥೆಗಳ ಆಂಥಾಲಜಿ ಸಿನಿಮಾ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಶಂಕರ್ ಅವರ ಅಪಾರ ಸಾಧನೆಗಾಗಿ 2024ರಲ್ಲಿ ಕರ್ನಾಟಕ ಸರಕಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಪತ್ರಕರ್ತರ ಸಂಘ ಸಂತಾಪ

ಮುಂಗಾರು, ಲಂಕೇಶ್ ಸೇರಿದಂತೆ ಹಲವು ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ಪತ್ರಕರ್ತ ಮತ್ತು ಉಲ್ಟಾ -ಪಲ್ಟಾ ಚಿತ್ರ ನಿರ್ದೇಶನ ಖ್ಯಾತಿಯ ಎನ್.ಎಸ್.ಶಂಕರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಶಂಕರ್ ಅವರ ಹಿರಿತನದ ವೃತ್ತಿ ಸೇವೆ ಸ್ಮರಿಸಿ ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಕಾರ್ಯಕ್ರಮದಲ್ಲಿ ಗೌರವಿಸಿದ್ದು ಮರೆಯಲಾಗದ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೆನಪಿಸಿಕೊಂಡಿದ್ದಾರೆ.

ಎನ್.ಎಸ್.ಶಂಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ತಗಡೂರು ಪ್ರಾರ್ಥಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries